ಸ್ಟಾರ್ಟ್‌ ಅಪ್‌ ಕಂಪನಿಗಳ ಬೆಳವಣಿಗೆಗೆ ಉಪಯುಕ್ತ:ಶೆಟ್ಟರ

posted in: ರಾಜ್ಯ | 0
ಹುಬ್ಬಳ್ಳಿ:‌ಹೊಸ ದಶಕದಲ್ಲಿ ಹೊಸ ಯುಗ ಸೃಷ್ಟಿಸುವ ಬಜೆಟ್‌ ಇದಾಗಿದ್ದು, ಕೇಂದ್ರ ಸರಕಾರ ಕೋವಿಡ್‌ ನಂತರದ ಆರ್ಥಿಕತೆ ಉತ್ತೇಜನ ನೀಡಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಂಡಿರುವುದು  ಕೇಂದ್ರ ಬಜೆಟ್ ನಲ್ಲಿ ಕಾಣಬಹುದಾಗಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ  ಸಚಿವ ಜಗದೀಶ್‌ ಶೆಟ್ಟರ್‌ ಪ್ರತಿಕ್ರಿಯಿಸಿದ್ದಾರೆ.
ಕೇಂದ್ರ ಆಯವ್ಯಯದ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಆರೋಗ್ಯ, ಎಂಎಸ್‌ಎಂಇ, ಸ್ಟಾರ್ಟ್‌ ಅಪ್‌ ಕ್ಷೇತ್ರಗಳಲ್ಲಿ ಹೆಚ್ಚಿನ ಅಭಿವೃದ್ದಿಗೆ ಕೇಂದ್ರ ಆಯವ್ಯಯ ಮುನ್ನಡಿ ಬರೆದಿದೆ. ಸ್ಟಾಂಡ್‌ ಅಪ್‌ ಇಂಡಿಯಾದ ಮೂಲಕ ಎಂಎಸ್‌ಎಂಇ ಗಳಿಗೆ 15,700 ಕೋಟಿಗಳ ಅನುದಾದ ನೀಡಲಾಗಿದೆ. ಹಿಂದೆ ನೀಡಿದ್ದಕ್ಕಿಂತ 2 ಪಟ್ಟು ಹೆಚ್ಚು ನೀಡಲಾಗಿದೆ. ಈ ಕ್ಷೇತ್ರದ ಅಭಿವೃದ್ದಿಗೆ ಅಗತ್ಯವಿರುವ ಎಲ್ಲಾ ರೀತಿಯ ಸಹಾಯವನ್ನು ನೀಡಲು ಕೇಂದ್ರ ಸರಕಾರ ಮುಂದಾಗಿದೆ. ಸಣ್ಣ ಕಂಪನಿಗಳ ವ್ಯಾಖ್ಯಾನ ಬದಲು ಮಾಡುವ ಮೂಲಕ ಸುಮಾರು 2 ಲಕ್ಷ ಕಂಪನಿಗಳಿಗೆ ಅನುಕೂಲ ಮಾಡಿಕೊಡಲಾಗಿದೆ. ಏಕವ್ಯಕ್ತಿ ಕಂಪನಿಗಳ ಸ್ಥಾಪನೆಗೂ ಪ್ರೋತ್ಸಾಹ ನೀಡಲಾಗಿದೆ. ಕನಿಷ್ಟ ಕೂಲಿಯನ್ನು ಎಲ್ಲಾ ವಿಭಾಗದ ಕೂಲಿ ಕಾರ್ಮಿಕರಿಗೂ ಅನ್ವಯ ಮಾಡಿರುವುದು ಹಾಗೂ ಮಹಿಳೆಯರು 24 ಗಂಟೆಗಳ ಕಾಲ ಕಾರ್ಯನಿರ್ವಹಿಸಲು ಅನುವು ಮಾಡಿಕೊಟ್ಟಿರುವುದು ಸಂತಸದ ವಿಷಯವಾಗಿದೆ ಎಂದು ಹೇಳಿದರು.
ಸ್ಟಾರ್ಟ್‌ ಅಪ್‌ ಉದ್ದಿಮೆಗಳಿಗೆ ಒಂದು ವರ್ಷ ರಿಲೀಫ್ ನೀಡಲಾಗಿದ್ದು, ಬಂಡವಾಳದ ಮೇಲಿನ ಲಾಭಕ್ಕೆ ತೆರಿಗೆ ವಿಧಿಸುವುದಿಲ್ಲ ಎಂದು ಕೇಂದ್ರ ಬಜೆಟ್‌ ನಲ್ಲಿ ತಿಳಿಸಲಾಗಿದೆ. ಇದು ದೇಶದಲ್ಲಿ ಸ್ಟಾರ್ಟ್‌ ಅಪ್‌ ಕಂಪನಿಗಳ ಬೆಳವಣಿಗೆ ಬಹಳ ಉಪಯೋಗವಾಗಲಿದೆ. ಒಟ್ಟಾರೆಯಾಗಿ ಪ್ರಗತಿಪರ ಹಾಗೂ ಕೋವಿಡ್‌ ಸಂಕಷ್ಟದಿಂದ ದೇಶವನ್ನು ಪ್ರಗತಿಯತ್ತ ಮುನ್ನಡೆಸಲು ಉತ್ತಮ ಮುನ್ನಡಿಯನ್ನು ಈ ಬಜೆಟ್‌ ನಲ್ಲಿ ಕೇಂದ್ರ ವಿತ್ತೀಯ ಸಚಿವರು ತೋರಿಸಿದ್ದಾರೆ ಎಂದರು.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ಚುನಾವಣೆ ಸನಿಹದಲ್ಲೇ ಬಿಜೆಪಿಯ ವಿಧಾನ ಪರಿಷತ್‌ ಸ್ಥಾನಕ್ಕೆ ಬಾಬುರಾವ್ ಚಿಂಚನಸೂರು ರಾಜೀನಾಮೆ : ಮುಂದಿನ ನಡೆ..?

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement