ದೆಹಲಿ ಪ್ರತಿಭಟನೆಗೆ ರಾಜ್ಯದಿಂದಲೂ ರೈತರು

posted in: ರಾಜ್ಯ | 0

ಬೆಂಗಳೂರು: ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯ ಹೊರವಲಯ ಸಿಂಗುದಲ್ಲಿ ನಡೆಯುತ್ತಿರುವ ರೈತ ಪ್ರತಿಭಟನೆಯಲ್ಲಿ ಭಾಗವಹಿಸಲು ರಾಜ್ಯದಿಂದ ಸಾವಿರಾರು ರೈತರು ಮಂಗಳವಾರದಿಂದ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು.

advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ಅಡ್ಮಿಶನ್ ಗಾಗಿ ಇಂದೇ ಕರೆ ಮಾಡಿ
9535127775 / 9901837775 / 6364528715 / 08362775155 / https://icsmpucollege.com/

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೆಹಲಿಯ ಗಡಿ ಭಾಗಗಳಲ್ಲಿ ಸಾವಿರಾರು ರೈತರು ಪ್ರತಿಭಟನೆ ನಡೆಸುತ್ತಿದ್ದು, ಅದಕ್ಕೆ ಬೆಂಬಲಿಸಿ ಫೆ.7ರವರೆಗೆ ರಾಜ್ಯದಿಂದ ರೈತರು ಹಂತ ಹಂತವಾಗಿ ದೆಹಲಿಗೆ ತೆರಳಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ನಾಳೆ ನಾನು ಸಹ ದೆಹಲಿಗೆ ತೆರಳುತ್ತಿದ್ದೇನೆ ಎಂದು ಹೇಳಿದರು.

ಜ.26ರಂದು ರೈತರ ಟ್ರ್ಯಾಕ್ಟರ್ ಪರೇಡ್‍ನಂದು ನಡೆದ ಘಟನೆ ರೈತರ ಸತ್ಯಾಗ್ರಹಕ್ಕೆ ಕಳಂಕ ತರುವ ಪೂರ್ವ ನಿಯೋಜಿತ ಕೃತ್ಯವಾಗಿದೆ.  ಅಲ್ಲಿ ದುಷ್ಕರ್ಮಿಗಳಿಂದ ಕಳಂಕ ಹಚ್ಚುವ ಕೆಲಸ ನಡೆದಿದೆ. ಈ ಕೃತ್ಯ ನಡೆಸಿದ ಆರೋಪಿಗಳಿಗೆ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು.

advertisement

ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

ಓದಿರಿ :-   ಕರ್ನಾಟಕದ ಸಿನಿ ಶೆಟ್ಟಿಗೆ ಮಿಸ್ ಇಂಡಿಯಾ-2022 ಕಿರೀಟ
advertisement

ನಿಮ್ಮ ಕಾಮೆಂಟ್ ಬರೆಯಿರಿ