ನ್ಯೂಯಾರ್ಕ: ಭಾರತೀಯ ಮೂಲದ ಭವ್ಯಾ ಲಾಲ್ ಅವರು ಅಮೆರಿಕದ ಸ್ಪೇಸ್ ಏಜೆನ್ಸಿ ನಾಸಾದ ಕಾರ್ಯಕಾರಿ ಸಿಬ್ಬಂದಿ ಮುಖ್ಯಸ್ಥೆಯಾಗಿ ನೇಮಕವಾಗಿದ್ದಾರೆ.
ನ್ಯೂಕ್ಲಿಯರ್ ಎಂಜಿನೀಯರಿಂಗ್ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದುಕೊಂಡಿರುವ ಭವ್ಯಾ, ಹಂಗಾಮಿ ಕಾರ್ಯಕಾರಿ ಮುಖ್ಯಸ್ಥೆಯಾಗಿ ನೇಮಕಗೊಂಡಿದ್ದಾರೆ. ಎಂಐಟಿಯಿಂದ ತಂತ್ರಜ್ಞಾನ ಮತ್ತು ಕಾರ್ಯನೀತಿಯಲ್ಲಿ ಸ್ನಾತಕೋತ್ತರ ಪದವಿ ಪಡೆದುಕೊಂಡಿರುವ ಅವರು ಜಾರ್ಜ ವಾಷಿಂಗ್ಟನ್ ವಿಶ್ವವಿದ್ಯಾಲಯದಿಂದ ಸಾರ್ವಜನಿಕ ಆಡಳಿತ ಹಾಗೂ ಸಾರ್ವಜನಿಕ ನೀತಿ ವಿಷಯಗಳಲ್ಲಿ ಡಾಕ್ಟರೇಟ್ ಪಡೆದುಕೊಂಡಿದ್ದಾರೆ.
೨೦೦೫ರಿಂದ ಇನ್ಸ್‌ಟಿಟ್ಯೂಟ್ ಫಾರ್ ಡಿಫೆನ್ಸ್ ಅನಾಲಿಸಿಸ್ ಸೈನ್ಸ್ ಆ್ಯಂಡ್ ಟೆಕ್ನಾಲಜಿ ಪಾಲಿಸಿ ಇನ್ಸ್‌ಟಿಟ್ಯೂಟ್‌ನಲ್ಲಿ ಸಂಶೋಧನಾ ಸಿಬ್ಬಂದಿ ಸದಸ್ಯರಾಗಿ ಭವ್ಯಾ ಲಾಲ್ ಸೇವೆ ಸಲ್ಲಿಸುತ್ತಿದ್ದಾರೆ. ಇದಕ್ಕೂ ಮುಂಚೆ ಅವರು ನಾಸಾದ ಬಜೆಟ್ ಹಾಗೂ ಹಣಕಾಸು ವಿಭಾಗದ ಹಿರಿಯ ಸಲಹೆಗಾರರಾಗಿಯೂ ಕಾರ್ಯನಿರ್ವಹಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ