ನವ ದೆಹಲಿ: ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಹ್ಮಣಿಯನ್ ಸ್ವಾಮಿ ಈಗ ಮತ್ತೊಮ್ಮೆ ಕೇಂದ್ರದ ತಮ್ಮದೇ ರ್ಕಾರದ ವಿರುದ್ಧ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಕಿಡಿಕಾರಿದ್ದಾರೆ.
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155
ಪೆಟ್ರೋಲ್ ಬೆಲೆ ವಿಷಯಕ್ಕಾಗಿ ಕೇಂದ್ರದ ಬಗ್ಗೆ ತಮ್ಮ ಅಸಮಾಧಾನ ವ್ಯಕ್ತಪಡಿಸಿರುವ ಸುಬ್ರಹ್ಮಣಿಯನ್ ಸ್ವಾಮಿ, ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ.ಭಾರತ ಹಾಗೂ ನೆರೆ ರಾಷ್ಟ್ರಗಳಲ್ಲಿನ ಪೆಟ್ರೋಲ್ ಬೆಲೆಯನ್ನು ಹೋಲಿಕೆ ಮಾಡಿರುವ ಫೋಟೊ ಇದಾಗಿದೆ.
ಪೆಟ್ರೋಲ್ ಬೆಲೆ ಏರಿಕೆ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿರುವ ಸ್ವಾಮಿ, ರಾಮನ ಭಾರತದಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 93 ರೂಪಾಯಿಗಳಾಗಿದೆ. ಸೀತೆಯ ನೇಪಾಳದಲ್ಲಿ ಪ್ರತಿ ಲೀಟರ್ ಗೆ 53 ರೂ.ಗಳಾಗಿದ್ದರೆ ರಾವಣನ ಲಂಕೆಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 51 ರೂ.ಗಳು ಎಂದು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.
(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)
0 / 5. ಒಟ್ಟು ವೋಟುಗಳು 0
ನಿಮ್ಮ ಕಾಮೆಂಟ್ ಬರೆಯಿರಿ