ನವ ದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರು ದೆಹಲಿಯ ಗಾಜಿಪುರ ಗಡಿಯಲ್ಲಿ ನಡೆಸುತ್ತಿರುವ ಪ್ರತಿಭಟನಾ ಆಂದೋಳನ ಮುಂದುವರೆದಿದ್ದು, ಫೆಬ್ರವರಿ 6ರಂದು ದೇಶಾದ್ಯಂತ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಲಿದ್ದಾರೆ.
ಸ್ವರಾಜ್ ಇಂಡಿಯಾ ಸಂಘಟನೆಯ ಯೋಗೇಂದ್ರ ಯಾದವ್ ಮತ್ತು ಇತರ ರೈತ ನಾಯಕರು ಈ ಕುರಿತು ಮಾಹಿತಿ ನೀಡಿದ್ದು, ಫೆ.6ರಂದು ಮಧ್ಯಾಹ್ನ 12ರಿಂದ ಮಧ್ಯಾಹ್ನ 3 ರ ವರೆಗೆ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿ ಬಂದ್ ನಡೆಸಲು ಕರೆ ನೀಡಿದ್ದಾರೆ.
ಈ ನಡುವೆ ದೆಹಲಿ ಗಾಜಿಪುರ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ತಡೆಯಲು ಪೊಲೀಸರು ಹೆದ್ದಾರಿಯಲ್ಲಿ ಬ್ಯಾರಿಕೇಡ್ ಗಳನ್ನು ಹಾಕಿ, ರಸ್ತೆಗೆ ಕಬ್ಬಿಣದ ಮೊಳೆಗಳನ್ನು ಅಳವಡಿಸಿ ದೆಹಲಿಯತ್ತ ರೈತರು ಹೋಗದಂತೆ ಕ್ರಮ ಕೈಗೊಂಡಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ