ನವ ದೆಹಲಿ: ದೆಹಲಿ ಸಿಂಗು ಗಡಿಯಲ್ಲಿ ರೈತರು ನಡೆಸುತ್ತಿರುವ ಆಂದೋಲನ ಸ್ಥಳದಲ್ಲಿ ಪೊಲೀಸರು ಬ್ಯಾರಿಕೇಡ್‍ಗಳು ಮತ್ತು ರಸ್ತೆ ತಡೆಗಳನ್ನು ನಿರ್ಮಿಸುತ್ತಿರುವುದನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಖಂಡಿಸಿದ್ದಾರೆ.
ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು
ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189
, ಕೇಂದ್ರ ಸರ್ಕಾರ ರೈತರ ನಡುವೆ ಸೇತುವೆಗಳನ್ನು ನಿರ್ಮಿಸಬೇಕೇ ಹೊರತು ಈ ರೀತಿ ಗೋಡೆಗಳನ್ನು ನಿರ್ಮಿಸುವುದಲ್ಲ ಎಂದು ರಾಹುಲ್ ಹೇಳಿದ್ದಾರೆ.
ದೆಹಲಿ-ಹರಿಯಾಣ ಗಡಿಯಲ್ಲಿರುವ ಹೆದ್ದಾರಿಯ ಮತ್ತೊಂದು ಭಾಗವನ್ನು ತಾತ್ಕಾಲಿಕ ಸಿಮೆಂಟ್ ಗೋಡೆ ನಿರ್ಮಿಸಿ ನಿರ್ಬಂಧಿಸಲಾಗಿದೆ. ಗಾಜಿಯಾಪುರ್ ಬಳಿಯ ದೆಹಲಿ-ಉತ್ತರ ಪ್ರದೇಶ ಗಡಿಯಲ್ಲಿ ಬಹುಸಂಖ್ಯೆಯಲ್ಲಿ ಬ್ಯಾರಿಕೇಡ್‍ಗಳನ್ನು ಹಾಕಿ ಹಾಗೂ ತಂತಿಬೇಲಿಗಳನ್ನು ನಿರ್ಮಿಸಿ ಓಡಾಟಕ್ಕೆ ಅಡ್ಡಿ ಪಡಿಸಿದ್ದಾರೆ ಎಂದು ರಾಹುಲ್ ಹೇಳಿದ್ದಾರೆ.
ರೈತರ ಪ್ರತಿಭಟನಾ ಸ್ಥಳಗಳಲ್ಲಿ ಕೇಂದ್ರ ಸರ್ಕಾರ ಸೇತುವೆಗಳನ್ನು ನಿರ್ಮಿಸಬೇಕೆ ಹೊರತು, ಗೋಡೆಗಳನ್ನಲ್ಲ ಎಂದು ಫೋಟೋಗಳ ಸಮೇತ ತಮ್ಮ ಟ್ವೀಟ್‍ನಲ್ಲಿ ಫೋಸ್ಟ್ ಮಾಡಿದ್ದಾರೆ. ಕೇಂದ್ರ ಸರ್ಕಾರ ರೈತರ ಜತೆ ಮಾತನಾಡಿ ಅವರ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿದ್ದಾರೆ.
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ