ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಗೆ ಸುಪ್ರೀಂಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ರಾಜ್ಯ ಸರಕಾರ ಅವಕಾಶ ಕೇಳಿದ ಮೇಲೆ ಹುಬ್ಬಳ್ಳಿ-ಧಾರವಾಡ ಸೇರಿದಂತೆ ರಾಜ್ಯದ ಕೆಲ ಮಹಾನಗರ ಪಾಲಿಕೆಗಳಿಗೆ ಎಂಟು ತಿಂಗಳಲ್ಲಿ ಚುನಾವಣೆ ನಡೆಸುವಂತೆ ಸರಕಾರಕ್ಕೆ ಸೂಚನೆ ನೀಡಿತ್ತು. ಇದನ್ನ ಪ್ರಶ್ನಿಸಿ ಸುಪ್ರೀಂಕೋರ್ಟಿಗೆ ಹೋಗಲಾಗಿತ್ತು.
ಸುಪ್ರೀಂಕೋರ್ಟ್ ಚುನಾವಣೆಗೆ ತಡೆಯಾಜ್ಞೆ ನೀಡಿದೆ. ಇದರಿಂದ ಚುನಾವಣೆ ಮತ್ತೆ ಮುಂದಕ್ಕೆ ಹೋಗಿದೆ. ಈಗಾಗಲೇ ಮಹಾನಗರ ಪಾಲಿಕೆಗೆ ಸುಮಾರು ೧೮ ತಿಂಗಳಿಂದ ಚುನಾವಣೆ ಇಲ್ಲದೇ ಅಧಿಕಾರಿಗಳ ಮೇಲೆ ನಡೆಯುತ್ತಿದೆ.
ನಿಮ್ಮ ಕಾಮೆಂಟ್ ಬರೆಯಿರಿ