ಕೋವಿಡ್‌ನಿಂದ ಆರ್ಥಿಕ ಸಂಕಷ್ಟ: ಸಾರಿಗೆ ನೌಕರರ ಸಂಬಳ ವಿಳಂಬ

ಬೆಂಗಳೂರು: ಕೋವಿಡ್  ಕಾರಣದಿಂದ ಸಾರಿಗೆ ಇಲಾಖೆ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ನೌಕರರಿಗೆ ವೇತನ ನೀಡಲು ಸಾಧ್ಯವಾಗದಂತಹ ಪರಿಸ್ಥಿತಿ ಬಂದಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ವಿಧಾನಸಭೆಗೆ ತಿಳಿಸಿದರು.

ಪ್ರಶ್ನೋತ್ತರ ಅವಧಿಯಲ್ಲಿ ಉತ್ತರಿಸಿದ ಅವರು, ಸಾರಿಗೆ ಸಂಸ್ಥೆಯ 4 ನಿಗಮಗಳು ನಷ್ಟದಲ್ಲಿವೆ. ಸದ್ಯಕ್ಕೆ ನಮಗೆ ಬರುತ್ತಿರುವ ಆದಾಯದಲ್ಲಿ ವಾಹನಗಳಿಗೆ ಇಂಧನ ಭರ್ತಿ ಮಾಡಿಕೊಳ್ಳಬಹುದೇ ಹೊರತು ನೌಕರರಿಗೆ ಸಂಬಳ ನೀಡಲು ಸಾಧ್ಯವಿಲ್ಲ ಎಂದು ಇಲಾಖೆಯ ದುಸ್ಥಿತಿ ಬಗ್ಗೆ ಹೇಳಿದರು.

ಕೋವಿಡ್ ಕಾರಣದಿಂದ ಬಸ್ ಸಂಚಾರ ಸ್ಥಗಿತಗೊಂಡಿತ್ತು. ನಿಗಮಗಳಿಂದಲೂ ವೇತನ ನೀಡಲು ಸಾಧ್ಯವಾಗಲಿಲ್ಲ. ಸರ್ಕಾರವೇ 1760 ಕೋಟಿ ಹಣ ಬಿಡುಗಡೆ ಮಾಡಿತು. ಡಿಸೆಂಬರ್ನಲ್ಲಿ  ಅರ್ಧ ವೇತನ    ನೀಡಲಾಗಿದೆ. ಜನವರಿಯಲ್ಲಿ ಇನ್ನೂ ವೇತನವನ್ನು ನೀಡಿಲ್ಲ ಎಂದರು.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಲೋಕಾಯುಕ್ತ ದಾಳಿ ವೇಳೆ 45.14 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ...!

ನಿಮ್ಮ ಕಾಮೆಂಟ್ ಬರೆಯಿರಿ

advertisement