ಗ್ರಾಪಂಗೆ ಸತಿ ಅಧ್ಯಕ್ಷೆ ಪತಿ ಉಪಾಧ್ಯಕ್ಷ

ಹುಬ್ಬಳ್ಳಿ: ಗ್ರಾಮ ಪಂಚಾಯತ ಚುನಾವಣೆಯಲ್ಲಿ ಜಯ ಸಾಧಿಸಿದ್ದ ದಂಪತಿಗಳಿಬ್ಬರು ಒಂದೇ ಗ್ರಾಮ ಪಂಚಾಯತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಗಮನ ಸೆಳೆದಿದ್ದಾರೆ.

ತಾಲೂಕಿನ ವರೂರು ಗ್ರಾಮ ಪಂಚಾಯತಿಯ ಅಧ್ಯಕ್ಷೆಯಾಗಿ ವಿಶಾಲಾಕ್ಷಿ ಚನ್ನಬಸನಗೌಡ ಚನ್ನಬಸನಗೌಡರ ಅವಿರೋಧವಾಗಿ ಆಯ್ಕೆಯಾದರೆ, ಚನ್ನಬಸನಗೌಡ ಚನ್ನಬಸನಗೌಡರ ಕೂಡ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುವುದು ವಿಶೇಷ. ವಿಶಾಲಾಕ್ಷಿ ೧ನೇ ವಾರ್ಡ್‌ ನಿಂದ ಆಯ್ಕೆಯಾದರೆ, ಚನ್ನಬಸನಗೌಡ ೨ನೇ ವಾರ್ಡ್‌ನಿಂದ ಚುನಾಯಿತರಾಗಿದ್ದಾರೆ.

ಗ್ರಾಮ ಪಂಚಾಯತಿಯ ಎಲ್ಲ ಸದಸ್ಯರ ಬೆಂಬಲದಿಂದಾಗಿ ನಾವಿಬ್ಬರು ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿರುವುದು ಸಾಧ್ಯವಾಗಿದೆ. ಜನರ ವಿಶ್ವಾಸವನ್ನು ಉಳಿಸಿಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ದಂಪತಿಗಳು ತಿಳಿಸಿದ್ದಾರೆ. ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿ ದಂಪತಿಗಳಿಬ್ಬರು ಒಂದೇ ಗ್ರಾಮ ಪಂಚಾಯತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿದ್ದಾರೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

ಓದಿರಿ :-   ಕಾಶ್ಮೀರ್ ಫೈಲ್ಸ್ ಸಿನಿಮಾದಿಂದ ಜಮ್ಮು -ಕಾಶ್ಮೀರದಲ್ಲಿ ಭಯೋತ್ಪಾದನೆಗೆ ಪ್ರಚೋದನೆ: ಮೆಹಬೂಬಾ ಮುಫ್ತಿ
advertisement

ನಿಮ್ಮ ಕಾಮೆಂಟ್ ಬರೆಯಿರಿ