ಚಿತ್ರಮಂದಿರಗಳಲ್ಲಿ ಪ್ರೇಕ್ಷಕರ ಸಂಪೂರ್ಣ ಹಾಜರಿಗೆ ಅನುಮತಿ

posted in: ರಾಜ್ಯ | 0

ಬೆಂಗಳೂರು: ಚಿತ್ರಮಂದಿರಗಳಲ್ಲಿ ಶೇ.೫೦ರಷ್ಟು  ಪ್ರೇಕ್ಷಕರ ಸಾಮರ್ಥ್ಯಕ್ಕೆ ಅವಕಾಶ ನೀಡಿದ್ದ ರಾಜ್ಯ ಸರ್ಕಾರದ ಕ್ರಮಕ್ಕೆ ಚಿತ್ರರಂಗದಲ್ಲಿ ಅಸಮಾಧಾನ ಭುಗಿಲೆದ್ದ ಬೆನ್ನಲ್ಲೇ   ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಶೇಕಡ ನೂರರಷ್ಟು ಪ್ರೇಕ್ಷಕರ ಹಾಜರಾತಿಯಲ್ಲಿ  ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಿದೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ರಾಜ್ಯ ಸರ್ಕಾರ ನಿನ್ನೆ ಥಿಯೇಟರ್ ಗಳಲ್ಲಿ ಶೇ.೫೦ರಷ್ಟು ಪ್ರೇಕ್ಷಕರಿಗೆ ಮಾತ್ರವೇ ಅವಕಾಶ ನೀಡಿ, ಕೊರೋನಾ ಪರಿಷ್ಕೃತ ಮಾರ್ಗಸೂಚಿ ಪ್ರಕಟಿಸಿತ್ತು.

ಸರ್ಕಾರದ ಈ ನಿರ್ಧಾರಕ್ಕೆ ಹಿರಿಯ ನಟ ಶಿವರಾಜ್ ಕುಮಾರ್ ಸೇರಿದಂತೆ ಅನೇಕ ನಟರು ಆಕ್ಷೇಪ ವ್ಯಕ್ತಪಡಿಸಿ ಕೂಡಲೇ  ಸರ್ಕಾರ ಅದಕ್ಕೆ ಮಣಿದು ಅವಕಾಶ ನೀಡಿದೆ. ನಾಳೆಯಿಂದಲೇ ನಾಲ್ಕು ವಾರಗಳ ಕಾಲ ಶೇ.೧೦೦ರಷ್ಟು ಚಿತ್ರಮಂದಿರಗಳ ಭರ್ತಿಗೆ  ಅನುಮತಿ ನೀಡಿದೆ.

ಆರೋಗ್ಯ ಮತ್ತು ವೈದ್ಯಕೀಯ ಸಚಿವ ಸುಧಾಕರ್ ಅವರನ್ನು ಚಿತ್ರರಂಗದ ಅನೇಕ ಗಣ್ಯರು ಭೇಟಿ ಮಾಡಿ ಶೇಕಡ ನೂರರಷ್ಟು ಸಾಮರ್ಥ್ಯದಲ್ಲಿ ಚಿತ್ರ ಪ್ರದರ್ಶನಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಒತ್ತಡ ಹಾಕಿದ್ದರು.

ನಟ ನಿರ್ಮಾಪಕರೂ ಆಗಿರುವ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ಈ ಸಂಬಂಧ ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸಿ ಶೇಕಡ ನೂರರಷ್ಟು ಅವಕಾಶ ಕಲ್ಪಿಸುವುದಾಗಿ ಭರವಸೆ ನೀಡಿದ್ದರು

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಇಂದಿನ ಪ್ರಮುಖ ಸುದ್ದಿ :-   ಮಕ್ಕಳ ಜೊತೆ ಅಸಭ್ಯ ವರ್ತನೆ : ಚಾಲಕನನ್ನು ಕಂಬಕ್ಕೆ ಕಟ್ಟಿ ಧರ್ಮದೇಟು ನೀಡಿದ ಗ್ರಾಮಸ್ಥರು

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

/ 5. ಒಟ್ಟು ವೋಟುಗಳು

ನಿಮ್ಮ ಕಾಮೆಂಟ್ ಬರೆಯಿರಿ

advertisement