ಟಿಎಂಸಿಯಿಂದ ಬಿಜೆಪಿಗೆ ಸಾಮೂಹಿಕ ವಲಸೆ ತಡೆಗೆ ನಿರ್ಧಾರ

ಕೋಲ್ಕತ್ತ: ತೃಣಮೂಲ ಕಾಂಗ್ರೆಸ್‌ನಿಂದ  ಬಿಜೆಪಿಗೆ ಸಾಮೂಹಿಕ ವಲಸೆಯನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿರು ತಮ್ಮ ಪಕ್ಷ ಆಡಳಿತ ಪಕ್ಷದ “ಬಿʼ ಟೀಮ್‌ ಆಗಲು ಇಷ್ಟಪಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಮುಂದೆ ಪಕ್ಷದ ಸ್ಥಳಿಯ  ಮುಖಂಡರ ಸಲಹೆ ಪಡೆದುಕೊಂಡು ಆಯ್ಕೆ ಮಾಡಿ ಪಕ್ಷಕ್ಕೆ ಸೇರಿಸಿಕೊಳ್ಳಲಾಗುವುದು ಎಂದು ಬಿಜೆಪಿ  ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್‌ ವಿಜಯವರ್ಗಿಯ ತಿಳಿಸಿದ್ದಾರೆ.

ತೃಣಮೂಲ ಕಾಂಗ್ರೆಸ್‌ ಶಾಸಕ ದೀಪಕ ಹಲ್ದರ  ಟಿಎಂಸಿ ತೊರೆದು ಬಿಜೆಪಿ ಸೇರ್ಪಡೆಗೊಂಡ ದಿನವೇ ಬಿಜೆಪಿ ಘೋಷಣೆ ಮಾಡಿದೆ. ಶುದ್ಧ ಚಾರಿತ್ರ್ಯ ಹೊಂದಿರದ ಹಾಗೂ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿಕೊಂಡವರು ನಮ್ಮ ಪಕ್ಷಕ್ಕೆ ಬರುವುದು ನಮಗೆ ಬೇಕಾಗಿಲ್ಲ. ಆದ್ದರಿಂದ ಸಾಮೂಹಿಕ ವಲಸೆಯನ್ನು ಮುಂದೆ ನಾವು ಬಯಸುವುದಿಲ್ಲ. ಆಯ್ಕೆ ಮಾಡಿ ಯೋಗ್ಯರನ್ನು ಮಾತ್ರ ಪಕ್ಷಕ್ಕೆ ಸೇರಿಸಿಕೊಳ್ಳಲಾಗುವುದು ಎಂದು ಕೈಲಾಶ್‌ ತಿಳಿಸಿದ್ದಾರೆ.

ಟಿಎಂಸಿ ಪಕ್ಷದಿಂದ ಬಿಜೆಪಿಗೆ ಬರುವವರಿಗೆ ಪ್ರಾಶಸ್ತ್ಯ ನೀಡುತ್ತಿರುವುದು ಮೂಲ ಬಿಜೆಪಿಗರ ಕಣ್ಣು ಕೆಂಪಾಗಿಸಿದ್ದರಿಂದ ಪಕ್ಷ ಈ ನಿರ್ಧಾರ ತೆಗೆದುಕೊಂಡಿದೆ. ಅಲ್ಲದೇ ರಾಜ್ಯದ ಆರ್‌ಎಸ್‌ಎಸ್‌ ಮುಖಂಡರು ಕೂಡ ಟಿಎಂಸಿಯಿಂದ ಸಾಮೂಹಿಕವಾಗಿ ಬಿಜೆಪಿಗೆ ಸೇರ್ಪಡೆಗೊಳ್ಳುವವರ ಬಗ್ಗೆ ಅಪಸ್ವರ ಎತ್ತಿದ್ದರು ಎಂದು ಮೂಲಗಳು ತಿಳಿಸಿವೆ.

ಇಂದಿನ ಪ್ರಮುಖ ಸುದ್ದಿ :-   ಏಷ್ಯನ್ ಗೇಮ್ಸ್ 2023: ಮೊದಲ ದಿನವೇ 5 ಪದಕ ಗೆದ್ದ ಭಾರತ

೨೦೧೯ರ ಲೋಕಸಭಾ ಚುನಾವಣೆ ನಂತರ ಟಿಎಂಸಿಯ ೧೮ ಶಾಸಕರು ಹಾಗೂ ಒಬ್ಬ ಸಂಸದ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಅಲ್ಲದೇ ಮೂವರು ಸಿಪಿಐ (ಎಂ) , ಸಿಪಿಐ ಹಾಗೂ ಕಾಂಗ್ರೆಸ್‌ ಪಕ್ಷದ ತಲಾ ಒಬ್ಬರು‌ ಶಾಸಕ ಕೂಡ ಕೇಸರಿ ಪಡೆಯನ್ನು ಸೇರಿದ್ದಾರೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement