ತಾಂತ್ರಿಕ ಸಮಸ್ಯೆ: ಐಟಿಐ ವಿದ್ಯಾರ್ಥಿಗಳ ಪರೀಕ್ಷೆಗೆ ತೊಡಕು

posted in: ರಾಜ್ಯ | 0

ಬೆಂಗಳೂರು: ತಾಂತ್ರಿಕ ತೊಂದರೆಯಿಂದಾಗಿ ಐಟಿಐ ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚಿತರಾಗುವ ಸ್ಥಿತಿ ಉಂಟಾಗಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ರಾಜ್ಯದಲ್ಲಿ ೧೭೫೦ಕ್ಕೂ ಹೆಚ್ಚು ಐಟಿಐ ಕಾಲೇಜುಗಳಿದ್ದು, ೧ ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಬೇಕಿದೆ. ಕಳೆದ ವರ್ಷ ಜುಲೈ-ಆಗಸ್ಟ್‌ನಲ್ಲಿ ನಡೆಯಬೇಕಿದ್ದ ಪರೀಕ್ಷೆಗಳನ್ನು ಕೊವಿಡ್‌ ಕಾರಣದಿಂದ ಮುಂದೂಡಲಾಗಿತ್ತು. ೨೦೨೦ರ ನವಂಬರ್‌ನಲ್ಲಿ ಪ್ರಾಯೋಗಿಕ ಹಾಗೂ ಎಂಜಿನೀಯರಿಂಗ್‌ ಡ್ರಾಯಿಂಗ್‌ ಪರೀಕ್ಷೆಗಳನ್ನು ನಡೆಸಲಾಗಿದೆ. ಉಳಿದ ವಿಷಯಗಳ ಪರೀಕ್ಷೆಗಳನ್ನು ಆನ್‌ಲೈನ್‌ ಮೂಲಕ ನಡೆಸಲು ಉದ್ಯೋಗ ಹಾಗೂ ತರಬೇತಿ ಇಲಾಖೆ ನಿರ್ಧರಿಸಿದೆ. ಆದರೆ ಆನ್‌ಲೈನ್‌ ಮೂಲಕ ಪರೀಕ್ಷಾ ಶುಲ್ಕ ಪಾವತಿಸಲು ಕೇವಲ ೨ ದಿನಗಳ ಕಾಲಾವಕಾಶ ನೀಡಿದ್ದರಿಂದ ಶುಲ್ಕ ಪಾವತಿಸಲಾಗದ ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚಿತರಾಗುವಂತಾಗಿದೆ. ಪರೀಕ್ಷಾ ಶುಲ್ಕ ಭರಿಸಿದ ವಿದ್ಯಾರ್ಥಿಗಳಿಗೆ ಮಾತ್ರ ಹಾಲ್‌ ಟಿಕೇಟ್‌ ದೊರೆತಿದೆ.

ಅಲ್ಲದೇ ಆನ್‌ಲೈನ್‌ ಪರೀಕ್ಷೆಯಲ್ಲಿ ಕೂಡ ಹಲವು ತೊಂದರೆಗಳು ಎದುರಾಗಿವೆ. ಕೆಲ ಪ್ರಶ್ನೆಗಳು ಪುನರಾವರ್ತನೆಗೊಂಡಿದ್ದರೆ, ಇನ್ನು ಕೆಲವರಿಗೆ ಉತ್ತರಗಳನ್ನು ಸಬ್‌ಮಿಟ್‌ ಮಾಡಲು ಸಾಧ್ಯವಾಗಿಲ್ಲ. ತರಾತುರಿಯಲ್ಲಿ ಪರೀಕ್ಷೆ ನಡೆಸಿದ್ದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ಉದ್ಯೋಗ ಹಾಗೂ ತರಬೇತಿ ಇಲಾಖೆ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟ ಆಡುತ್ತಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಆಫ್‌ಲೈನ್‌ ಪರೀಕ್ಷೆ ನಡೆಸುವಂತೆ ಆಗ್ರಹಿಸಿದ್ದಾರೆ.

ಇಂದಿನ ಪ್ರಮುಖ ಸುದ್ದಿ :-   ಹಿಂದುತ್ವದ ಬಗ್ಗೆ ಪೋಸ್ಟ್; ನಟ ಚೇತನ್ ಬಂಧನ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement