ಪಾಕ್‌ ಪರ ಘೋಷಣೆ ಇಂದು ಆರೋಪಿಗಳ ವಿಚಾರಣೆ

ಹುಬ್ಬಳ್ಳಿ: ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪ ಎದುರಿಸುತ್ತಿರುವ ಕಾಶ್ಮೀರ ಮೂಲದ ಮೂವರು ವಿದ್ಯಾರ್ಥಿಗಳಿಗೆ ನ್ಯಾಯಾಲಯ ಸಮನ್ಸ್‌ ನೀಡಿದ ಹಿನ್ನೆಲೆಯಲ್ಲಿ ಬುಧವಾರ ೫ನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯಕ್ಕೆ ಮೂವರು ಆರೋಪಿಗಳು ಹಾಜರಾದರು.

ಭಾರಿ ಪೊಲೀಸ್‌ ಬಿಗಿ ಭದ್ರತೆಯಲ್ಲಿ ಆರೋಪಿಗಳನ್ನು ನ್ಯಾಯಾಲಯಕ್ಕೆ ಕರೆತರಲಾಯಿತು. ನ್ಯಾಯಾಧೀಶರು  ಮುಂದಿನ ವಿಚಾರಣೆಯನ್ನು ಮಾರ್ಚ್‌ ೧೦ಕ್ಕೆ ಮುಂದೂಡಿದರು. ನಗರದ ಕಾಲೇಜೊಂದರಲ್ಲಿ ಶಿಕ್ಷಣ ಪಡೆಯುತ್ತಿರುವ ಕಾಶ್ಮೀರ ಮೂಲದ ವಿದ್ಯಾರ್ಥಿಗಳು ಪಾಕ್‌ ಪರ ಘೋಷಣೆ ಕೂಗಿದರೆನ್ನಲಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು.

 

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಸರ್ಕಾರದಿಂದ ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್‌ ; ಇದು ಓಲೈಕೆ ರಾಜಕಾರಣ ಎಂದು ಬಿಜೆಪಿ ಕಿಡಿ

ನಿಮ್ಮ ಕಾಮೆಂಟ್ ಬರೆಯಿರಿ

advertisement