ನವ ದೆಹಲಿ: ದೆಹಲಿ ಗಡಿಯಲ್ಲಿ ಪೊಲೀಸರು ರಸ್ತೆಗಳಲ್ಲಿ ನಿರ್ಮಿಸಿದ ಬ್ಯಾರಿಕೇಡ್‌ಗಳನ್ನು ತೆರವುಗೊಳಿಸುವವರೆಗೆ ಹಾಗೂ ಇಂಟರ್‌ನೆಟ್ ಸೇವೆಯ ತಡೆಯನ್ನು ತೆರವುಗೊಳಿಸುವವರೆಗೆ ಕೇಂದ್ರ ಸರಕಾರದೊಂದಿಗೆ ಯಾವುದೇ ಔಪಚಾರಿಕ ಮಾತುಕತೆ ನಡೆಸುವುದಿಲ್ಲ ಎಂದು ರೈತ ಹೋರಾಟದ ನೇತೃತ್ವ ವಹಿಸಿದ ಸಂಯುಕ್ತ ಕಿಸಾನ್ ಮೋರ್ಚಾ ತಿಳಿಸಿದೆ.
ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ ಟಿಕಾಯತ್, ಪೊಲೀಸರು ಬ್ಯಾರಿಕೇಡ್ ಹಾಕುವ ಮೂಲಕ ರೈತರ ಹೋರಾಟ ತಡೆಯಲು ಸಾಧ್ಯವಿಲ್ಲ. ಅಕ್ಟೋಬರ್-ನವಂಬರ್‌ವರೆಗೆ ಹೋರಾಟ ನಡೆಸಲು ನಾವು ಸಿದ್ಧರಾಗಿದ್ದೇವೆ ಎಂದು ತಿಳಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ