ಇಂದಿನಿಂದ ರಾಷ್ಟ್ರಪತಿಗಳ  ೪ ದಿನಗಳ ಕರ್ನಾಟಕ ಪ್ರವಾಸ

ಬೆಂಗಳೂರು: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಗುರುವಾರ ರಾಜ್ಯಕ್ಕೆ ಆಗಮಿಸಲಿದ್ದಾರೆ.
ನಾಲ್ಕು ದಿನಗಳ ಕಾಲ ಅನೇಕ ಅಧಿಕೃತ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ವಿಶೇಷ ವಿಮಾನದ ಮೂಲಕ ಗುರುವಾರ ರಾತ್ರಿ ಬೆಂಗಳೂರಿಗೆ ಆಗಮಿಸುವ ರಾಷ್ಟ್ರಪತಿ ಅವರು ಶುಕ್ರವಾರ (ಫೆ.೫) ಮಧ್ಯಾಹ್ನ ಏರೋ ಇಂಡಿಯಾ ಪ್ರದರ್ಶನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಫೆ.6ರಂದು ತಲಕಾವೇರಿಗೆ ಭೇಟಿ ನೀಡಲಿದ್ದು, ಅಂದು ಮಧ್ಯಾಹ್ನ ಮಡಿಕೇರಿಯಲ್ಲಿ ಜನರಲ್ ತಿಮ್ಮಯ್ಯ ಸ್ಮಾರಕ ವಸ್ತು ಸಂಗ್ರಹಾಲಯ ಉದ್ಘಾಟಿಸಲಿದ್ದಾರೆ. ಫೆ.7ರಂದು ಬೆಳಗ್ಗೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 23ನೇ ವಾರ್ಷಿಕ ಘಟಿಕೋತ್ಸವದಲ್ಲಿ ಭಾಗವಹಿಸಲಿದ್ದಾರೆ. ಅಂದು ಸಂಜೆ ದೆಹಲಿಗೆ ತೆರಳಿದ್ದಾರೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಹೊರಗುತ್ತಿಗೆ ನೌಕರರ ನೇಮಕಾತಿಯಲ್ಲಿ ಮೀಸಲಾತಿ: ಸರ್ಕಾರದ ಆದೇಶ

ನಿಮ್ಮ ಕಾಮೆಂಟ್ ಬರೆಯಿರಿ

advertisement