ದಂಪತಿಯಿಂದ ಆತ್ಮಹತ್ಯೆಗೆ ಯತ್ನ, ಪತಿ ಸಾವು

posted in: ರಾಜ್ಯ | 0

ಬೆಳಗಾವಿ: ಕೌಟುಂಬಿಕ ಕಲಹಕ್ಕೆ ಬೇಸತ್ತ ಬೆಳಗಾವಿಯ ದಂಪತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಘಟನೆಯಲ್ಲಿ ಪತಿ ಮೃತಪಟ್ಟಿದ್ದು,
ಗಂಭೀರವಾಗಿ ಗಾಯಗೊಂಡಿರುವ ಪತ್ನಿಯನ್ನುಆಸ್ಪತ್ರೆಗೆ ಸೇರಿಸಲಾಗಿದೆ.
ಮಾಧ್ಯಮ ಕ್ಷೇತ್ರದ ಮುದ್ರಣ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಬೆಳಗಾವಿಯ ಹಿಂಡಲಗಾ ತಾಲೂಕಿನ ರಾಕೇಶ್ ಪಾಟೀಲ್ ಮೃತಪಟ್ಟವ. ಕೌಟುಂಬಿಕ ಕಲಹವೇ ಆತ್ಮಹತ್ಯೆಗೆ ಕಾರಣ ಎನ್ನಲಾಗಿದ್ದು, ಗುರುವಾರ ಮುಂಜಾನೆ ನಗರದ ಎರಡನೇ ರೈಲ್ವೆ ಗೇಟ್ ಬಳಿ ಗೂಡ್ಸ್ ರೈಲಿಗೆ ದಂಪತಿ ತಲೆಕೊಟ್ಟಿದ್ದಾರೆ. ಘಟನೆಯಲ್ಲಿ ಪತಿ ರಾಕೇಶ್ ಪಾಟೀಲ್ ಮೃತಪಟ್ಟಿದ್ದಾರೆ. ಪತ್ನಿ ಅಸ್ಮಿತಾ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ