ರಾಮ ಮಂದಿರಕ್ಕೆ ನಿಧಿ ಸಮರ್ಪಣೆ ಈಗ ಕಾಂಗ್ರೆಸ್‌ನವರೂ ಭಾಗಿ..!

 

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ವಿಭಾಗದ ರಾಷ್ಟ್ರೀಯ ವಿದ್ಯಾರ್ಥಿ ಸಂಘವು (NSUI) ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ರಾಜಸ್ಥಾನದಲ್ಲಿ ಮಂಗಳವಾರ ದೇಣಿಗೆ ಚಾಲನೆ ನೀಡಿದೆ.ಕೆಲವೇ ದಿನಗಳ ಹಿಂದೆ, ಕೇರಳದಲ್ಲಿ ಕಾಂಗ್ರೆಸ್ ಮುಖಂಡರು ಆಲಪ್ಪುಳ ಜಿಲ್ಲೆಯಲ್ಲಿ ಆರ್‌ಎಸ್‌ಎಸ್ ನಡೆಸಿದ ರಾಮ ಮಂದಿರ ನಿಧಿ ಸಂಗ್ರಹ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದರು.
ರಾಜಸ್ಥಾನದ ಜೈಪುರದಲ್ಲಿ “ಏಕ ರುಪಯ್ಯಾ ರಾಮ್ ಕೆ ನಾಮ್’ʼ ಎಂಬ ಹೆಸರಿನ ದೇಣಿಗೆ ಚಾಲನೆ ನೀಡಿದ ಎನ್‌ಎಸ್‌ಯುಐ ರಾಜ್ಯ ಅಧ್ಯಕ್ಷ ಅಭಿಷೇಕ್ ಚೌಧರಿ, ದೇವಾಲಯಕ್ಕೆ ಹಣ ಸಂಗ್ರಹಿಸುವ ಹೆಸರಿನಲ್ಲಿ ಬಿಜೆಪಿ ಮತ್ತು ಅಖಿಲ ಬಾರತೀಯ ವಿದ್ಯಾರ್ಥಿ ಪರಿಷತ್‌ ಜನರನ್ನು “ಲೂಟಿ” ಮಾಡುತ್ತಿದೆ, ಹೀಗಾಗಿ ತಾವು ಈ ನಿರ್ಧಾರ ತೆಗೆದುಕೊಳ್ಳಲು ಕಾರಣವಾಯಿತು ಎಂದು ಹೇಳಿದ್ದಾರೆ. ಅಲ್ಲದೆ, ಕೆಲವು ಜನರ ಬಳಿ ನಿರ್ದಿಷ್ಟ ಮೊತ್ತ ದಾನ ಮಾಡಲು ಒತ್ತಾಯಿಸುತ್ತಿದ್ದಾರೆ ಎಂದು ನಮಗೆ ಮಾಹಿತಿ ಬಂದಿದೆ. ಹೀಗಾಗಿ ಮಂದಿರ ನಿರ್ಮಾಣಕ್ಕೆ ಯಾರಾದರೂ 1 ರೂಪಾಯಿ ಸಹ ನೀಡಲು ಸಿದ್ಧರಿದ್ದರೆ ಅದನ್ನೂ ಗೌರವಿಸಬೇಕು” ಎಂದು ಹೇಳಿದ್ದಾರೆ.
ಕೇರಳದಲ್ಲಿ ನಿಧಿ ಸಮರ್ಪಣಾ ಅಭಿಯಾನ ಉದ್ಘಾಟಿಸಿದ್ದರ ಬಗ್ಗೆ ಕಾಂಗ್ರೆಸ್‌ ಮುಖಂಡ ರೆಘುನಾಥ ಪಿಳ್ಳೈ, ತಾನು ದೇವಸ್ಥಾನದ ಚೇರ್ಮನ್‌ ಆಗಿದ್ದು, ತಮ್ಮ ದೇವಸ್ಥಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ದೇವಸ್ಥಾನದ ಅರ್ಚಕರ ಒತ್ತಾಸೆಯ ಮೇರೆಗೆ ರಾಮ ಮಂದಿರ ನಿಧಿ ಸಮರ್ಪಣಾ ಕಾರ್ಯಕ್ರಮ ಉದ್ಘಾಟಿಸಿದ್ದೆ. ಇದರಲ್ಲಿ ಯಾವುದೇ ರಾಜಕೀಯವಿಲ್ಲ ಎಂದು ತಮ್ಮ ವಿರುದ್ಧ ಕೆಲವರಿಂದ ಬಂದ ಟೀಕೆಗಳಿಗೆ ಅವರು ಪ್ರತಿಕ್ರಿಯಿಸಿದ್ದಾರೆ. ಆದರೆ ಕಾಂಗ್ರೆಸ್‌ ಹಿರಿಯ ನಾಯಕರು ಈ ವಿದ್ಯಮಾನದಿಂದ ದೂರವಿರಲು ಪ್ರಯತ್ನಿಸಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿದ ಕಾಂಗ್ರೆಸ್‌ನ ರಾಷ್ಟ್ರೀಯ ಖಜಾಂಚಿ ಪವನ್ ಬನ್ಸಾಲ್‌, ರಾಜಸ್ಥಾನದ ಎನ್‌ಎಸ್‌ಯುಐ ರಾಮ್ ದೇವಾಲಯಕ್ಕೆ ಹಣ ಸಂಗ್ರಹಿಸಲಿದೆ ಎಂದು ನನಗೆ ತಿಳಿದಿರಲಿಲ್ಲ. ಆದರೆ ಇದು ಕಾಂಗ್ರೆಸ್ ನಿಲುವು ಅಲ್ಲ. ಕಾಂಗ್ರೆಸ್ ಜಾತ್ಯತೀತ ನಿಲುವು ಹೊಂದಿದೆ. ರಾಮ ದೇವಾಲಯಕ್ಕೆ ದೇಣಿಗೆ ಸಂಗ್ರಹಿಸುವ ಯೋಜನೆ ಕಾಂಗ್ರೆಸ್ಸಿಗೆ ಇಲ್ಲ. ಇಂಥ ಕಾರ್ಯಕ್ರಮಕ್ಕೆ ನನ್ನನ್ನು ಸಹ ಸಂಪರ್ಕಿಸಲಾಗಿತ್ತು. ಆದರೆ ನಾನು ನಿರಾಕರಿಸಿದ್ದೇನೆ, ಏಕೆಂದರೆ ನನಗೆ ಧರ್ಮ ಎಂಬುದು ನನ್ನ ವೈಯಕ್ತಿಕ ನಂಬಿಕೆ ಮತ್ತು ವಿಷಯವಾಗಿದೆ ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರೊಂದಿಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಇಂದಿನ ಪ್ರಮುಖ ಸುದ್ದಿ :-   ವಿಶ್ವದ ಟಾಪ್‌ 15 ಶ್ರೀಮಂತರ ಪಟ್ಟಿಯಿಂದಲೂ ಹೊರಬಿದ್ದ ಗೌತಮ್‌ ಅದಾನಿ...! ಈಗ ಮುಕೇಶ ಅಂಬಾನಿ ಏಷ್ಯಾದ ನಂ.1 ಶ್ರೀಮಂತ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

/ 5. ಒಟ್ಟು ವೋಟುಗಳು

ನಿಮ್ಮ ಕಾಮೆಂಟ್ ಬರೆಯಿರಿ

advertisement