ರೈತ ಹೋರಾಟ ಹಾಲಿವುಡ್‌ ಸೆಲೆಬ್ರಿಟಿಗಳ ಬೆಂಬಲಕ್ಕೆ ಕ್ರೀಡಾಪಟುಗಳ ಚಾಟಿ

ನವದೆಹಲಿ: ನೂತನ ಕೃಷಿ ಮಸೂದೆಗಳನ್ನು ಕೈಬಿಡಬೇಕೆಂದು ಆಗ್ರಹಿಸಿ ನಡೆಯುತ್ತಿರುವ ರೈತರ ಹೋರಾಟಕ್ಕೆ ಕೆಲ ವಿದೇಶಿಗರು ಬೆಂಬಲಿಸಿದ್ದನ್ನು ದೇಶದ ಪ್ರಮುಖ ಕ್ರೀಡಾಪಟುಗಳು ಖಂಡಿಸಿದ್ದಾರೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಕ್ರಿಕೆಟ್‌ ದಿಗ್ಗಜ ಸಚಿನ್‌ ತೆಂಡುಲ್ಕರ, ಹಿರಿಯ ಅಥ್ಲೀಟ್‌ ಪಿ.ಟಿ.ಉಷಾ ಸೇರಿದಂತೆ ಹಲವು ಆಟಗಾರರು ರೈತರ ಹೋರಾಟಕ್ಕೆ ಹಾಲಿವುಡ್‌ ಸೆಲೆಬ್ರಿಟಿಗಳು ಬೆಂಬಲಿಸುವುದನ್ನು ವಿರೋಧಿಸಿದ್ದಾರೆ. ಭಾರತದ ಏಕತೆಗೆ ಧಕ್ಕೆ ತರುವುದನ್ನು ಸಹಿಸುವುದಿಲ್ಲ. ಬಾಹ್ಯ ಶಕ್ತಿಗಳು ನಮ್ಮ ದೇಶದ ಆಂತರಿಕ ವ್ಯವಹಾರಗಳಲ್ಲಿ ಪಾಲ್ಗೊಳ್ಳುವುದು ಸರಿಯಲ್ಲ ಎಂದು ಸಚಿನ್‌ ತೆಂಡುಲ್ಕರ್‌ ಟ್ವೀಟ್‌ ಮಾಡಿದ್ದಾರೆ.

ಕೃಷಿಕರು ದೇಶದ ಅವಿಭಾಜ್ಯ ಅಂಗ. ರೈತರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ದೊರೆಯುವ ವಿಶ್ವಾಸವಿದೆ. ಇಂಥ ಸಂದರ್ಭದಲ್ಲಿ ನಾವೆಲ್ಲ ಒಗ್ಗಟ್ಟಿನಿಂದ ಇರಬೇಕು ಎಂದು ಟೀಮ್‌ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ ಟ್ವೀಟ್‌ ಮಾಡಿದ್ದಾರೆ. ಕ್ರಿಕೆಟಿಗ ಅನಿಲ್‌ ಕುಂಬ್ಳೆ ಕೂಡ ಬಾಲಿವುಡ್‌ ಸೆಲೆಬ್ರಿಟಿಗಳ ಹೇಳಿಕೆಯನ್ನು ಖಂಡಿಸಿದ್ದಾರೆ. ಕೋಚ್‌ ರವಿಶಾಸ್ತ್ರಿ ಟ್ವೀಟ್‌ನಲ್ಲಿ ಇದು ನಮ್ಮ ದೇಶದ ಆಂತರಿಕ ವಿಷಯವಾಗಿದ್ದು, ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಯುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

ನಮಗೆ ಭಾರತದ ಸಂಸ್ಕೃತಿ ಬಗ್ಗೆ ಹೆಮ್ಮೆಯಿದೆ. ನಮ್ಮ ಆಂತರಿಕ ವಿಷಯಗಳಲ್ಲಿ ಹೊರಗಿನವರು ಮೂಗು ತೂರಿಸುವ ಅವಶ್ಯಕತೆಯಿಲ್ಲ. ನಮ್ಮ ಸಮಸ್ಯೆಗಳನ್ನು ಹೇಗೆ ಬಗೆಹರಿಸಿಕೊಳ್ಳಬೇಕೆಂಬುದು ನಮಗೆ ತಿಳಿದಿದೆ ಏಕೆಂದರೆ ಅನೇಕತೆಯಲ್ಲಿ ಏಕತೆ ಎಂಬ ತತ್ವವನ್ನು ಅನುಸರಿಸುತ್ತಿರುವ ಪ್ರಪಂಚದ ಏಕೈಕ ದೇಶ ನಮ್ಮದಾಗಿದೆ ಎಂದು ಹಿರಿಯ ಅಥ್ಲೀಟ್‌ ಪಿ.ಟಿ. ಉಷಾ ಟ್ವೀಟ್‌ನಲ್ಲಿ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಇದೇ ರೀತಿ ಬ್ಯಾಡ್ಮಿಂಟನ್‌ ತಾರೆ ಸೈನಾ ನೆಹ್ವಾಲ್‌ ಕೂಡ ಹಾಲಿವುಡ್‌ ಸೆಲೆಬ್ರಿಟಿಗಳ ಹೇಳಿಕೆಯನ್ನು ಖಂಡಿಸಿದ್ದಾರೆ.

ಇಂದಿನ ಪ್ರಮುಖ ಸುದ್ದಿ :-   ಎನ್‌ಐಆರ್‌ ಎಫ್‌ 2023 ಶ್ರೇಯಾಂಕ: ಒಟ್ಟಾರೆ ವಿಭಾಗದಲ್ಲಿ ಐಐಟಿ ಮದ್ರಾಸಿಗೆ ಅಗ್ರಸ್ಥಾನ, ಬೆಂಗಳೂರು ಐಐಎಸ್‌ ಸಿಗೆ 2ನೇ ಸ್ಥಾನ ; ಸಂಪೂರ್ಣ ಪಟ್ಟಿ ಇಲ್ಲಿದೆ

 

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement