ಶಾಲಾ ಸಮಯದಲ್ಲಿ ಹೆಚ್ಚಿನ ಬಸ್‌ ಬಿಡಲು ಮನವಿ

ಬೆಂಗಳೂರು: ರಾಜ್ಯದಲ್ಲಿ ಶಾಲಾ ಕಾಲೇಜುಗಳು ಪೂರ್ಣಪ್ರಮಾಣದಲ್ಲಿ ಆರಂಭವಾಗಿರುವ ಹಿನ್ನೆಲೆಯಲ್ಲಿ ಮಕ್ಕಳ ಶಾಲಾ ಸಮಯಕ್ಕೆ ಅನುಕೂಲವಾಗುವಂತೆ ಸಾರಿಗೆ ಸಂಸ್ಥೆಯ ಬಸ್ಸುಗಳ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸಾರಿಗೆ ಸಚಿವರೂ ಆದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಗೆ ಮನವಿ ಮಾಡಿದ್ದಾರೆ.
ಈ ಕುರಿತು ಸಾರಿಗೆ ಸಚಿವರಿಗೆ ಆ ಪತ್ರ ಬರೆದಿರುವ ಅವರು, ಸಾರಿಗೆ ನಿಗಮಗಳು ವಿದ್ಯಾರ್ಥಿಗಳಿಗೆ ರಿಯಾಯತಿ ಪಾಸುಗಳನ್ನು ಒದಗಿಸಿ ಅನುಕೂಲ ಮಾಡಿಕೊಟ್ಟಿವೆ. ಆದರೆ ಬಹುತೇಕ ಕಡೆಗಳಲ್ಲಿ ಸರ್ಕಾರಿ ಬಸ್ ಸೌಲಭ್ಯವನ್ನೇ ಅವಲಂಬಿಸಿರುವ ಆ ಮಕ್ಕಳು ಶಾಲೆಗಳಿಗೆ ಸರಿಯಾಗಿ ಹಾಜರಾಗುತ್ತಿಲ್ಲವೆಂಬುದು ಶಿಕ್ಷಣ ಇಲಾಖೆಯ ಅಧಿಕಾರಿಗಳ ವರದಿಯಲ್ಲಿ ವ್ಯಕ್ತವಾಗಿದೆ. ಶಾಲಾ ಸಮಯಕ್ಕೆ ಅನುಕೂಲವಾಗುವಂತೆ ಬಸ್ ಸಂಖ್ಯೆ ಹೆಚ್ಚಿಸಬೇಕೆಂದು ಮನವಿ ಮಾಡಿದ್ದಾರೆ.
ಕೊರೋನಾ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಭೆ ಸೇರಿ ಶಾಲೆಗಳನ್ನು ಆರಂಭಿಸುವ ತೀರ್ಮಾನ ಕೈಗೊಂಡಂತೆ ಶಾಲಾ ಕಾಲೇಜುಗಳು ತಡವಾಗಿ ಆರಂಭವಾಗಿದ್ದು, ಪ್ರಸ್ತುತ ಶಾಲೆಗಳು ಪೂರ್ಣ ಅವಧಿ ನಡೆಯುತ್ತಿವೆ.ಕೊರೋನಾ ಮಧ್ಯೆಯೂ ಶಾಲೆಗಳಿಗೆ ಮಕ್ಕಳು ನಮ್ಮ ನಿರೀಕ್ಷೆಯನ್ನೂ ಮೀರಿ ಬರುತ್ತಿದ್ದಾರೆ. ಸಾರಿಗೆ ನಿಗಮಗಳು ವಿದ್ಯಾರ್ಥಿಗಳಿಗೆ ರಿಯಾಯತಿ ಪಾಸುಗಳನ್ನು ನೀಡಿ ಅನುಕೂಲ ಮಾಡಿಕೊಟ್ಟಿವೆ.
ಬಸ್ ಗಳು ಸರಿಯಾದ ಸಮಯಕ್ಕೆ ಬಾರದೇ ಕೆಲವಡೆ ಮಕ್ಕಳು ಗಂಟೆಗಟ್ಟಲೇ ಕಾಯುತ್ತಿದ್ದಾರೆಂದು ಮತ್ತು ಕಾದು ಕಾದು ಶಾಲೆಯ ಸಮಯ ಮೀರಿದ್ದರಿಂದ ಶಾಲೆಗೆ ಬಾರದೇ ಮನೆಯತ್ತಲೇ ಹೆಜ್ಜೆ ಹಾಕಿದ್ದಾರೆಂಬ ವರದಿಗಳೂ ಇವೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ರಾಜ್ಯದ ಬಹುತೇಕ ಹಳ್ಳಿಗಳ ವಿದ್ಯಾರ್ಥಿಗಳು ತಾಲೂಕು ಕೇಂದ್ರಗಳಿಗೆ, ತಾಲೂಕು ಕೇಂದ್ರಗಳಿಂದ ಜಿಲ್ಲಾ ಕೇಂದ್ರಗಳ ಶಾಲಾ ಕಾಲೇಜುಗಳಿಗೆ ಹೋಗಿಬರಬೇಕಾಗಿದೆ. ಬಸ್ ಸೌಲಭ್ಯ ದೊರೆಯದೆ ಮಕ್ಕಳು ಶಾಲೆಗೆ ಬರದಿದ್ದರೆ ಶಾಲೆಗಳನ್ನು ಆರಂಭಿಸಿದ್ದರ ಉದ್ದೇಶ ಸಾಕಾರವಾಗುವುದಿಲ್ಲ. ಇದು ವಿಶೇಷವಾಗಿ ಗ್ರಾಮೀಣ ಪ್ರದೇಶಗಳ ಮಕ್ಕಳ ಶೈಕ್ಷಣಿಕ ಹಿನ್ನೆಡೆಗೆ ಕಅರಣವಾಗುವುದರಿಂದ ಶಾಲಾ ಸಮಯದಲ್ಲಿ ಹೆಚ್ಚಿನ ಬಸ್‌ಗಳನ್ನು ಬಿಡಬೇಕು ಎಂದು ಮನವಿ ಮಾಡಿದ್ದಾರೆ.

ಪ್ರಮುಖ ಸುದ್ದಿ :-   ರಾಜ್ಯದಲ್ಲಿ ತಾಪಮಾನ ಏರಿಕೆ : ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement