ಬೆಂಗಳೂರು;ವಿಧಾನ ಪರಿಷತ್ತಿನ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ತಮ್ಮ ರಾಜೀನಾಮೆ ಪತ್ರವನ್ನು ಉಪಸಭಾಪತಿ ಎಂ.ಕೆ ಪ್ರಾಣೇಶ್ ಅವರಿಗೆ ಸಲ್ಲಿಸಿದರು.
ಈ ವೇಳೆ ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ಸದಸ್ಯರು ಪ್ರತಾಪಚಂದ್ರ ಶೆಟ್ಟಿ ಅವರನ್ನು ಅಭಿನಂದಿಸಿದರು
ಬಿಜೆಪಿ-ಜೆಡಿಎಸ್ ಮೈತ್ರಿ:
ವಿಧಾನಪರಿಷತ್ ನಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ಹೀಗಾಗಿ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ್ದರು.ಜೆಡಿಎಸ್ ಜೊತೆ ಕೈಜೋಡಿಸಿದ್ದರಿಂದ ಕಾಂಗ್ರೆಸ್ ಪಕ್ಷವು ಬಹುಮತ ಕಳೆದುಕೊಂಡ ಹಿನ್ನೆಲೆಯಲ್ಲಿ ಪ್ರತಾಪಚಂದ್ರ ಶೆಟ್ಟಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಸಭಾಪತಿಯಾಗಿ ಹೊರಟ್ಟಿ: ಬಿಜೆಪಿ ಮತ್ತು ಜೆಡಿಎಸ್ ಒಪ್ಪಂದದಂತೆ ಸಭಾಪತಿ ಸ್ಥಾನವನ್ನು ಜೆಡಿಎಸ್ ಗೆ ಬಿಟ್ಟು ಕೊಡಲು ನಿರ್ಧರಿಸಲಾಗಿದೆ. ಜೆಡಿಎಸ್ ನ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಅವರು ಸಭಾಪತಿಯಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ
ನಿಮ್ಮ ಕಾಮೆಂಟ್ ಬರೆಯಿರಿ