ಎಸ್‌ಟಿ ಮೀಸಲಿಗಾಗಿ ಫೆ.೭ರಂದು ಕುರುಬರ ಬೃಹತ್‌ ಸಮಾವೇಶ

ಬೆಂಗಳೂರು: ಕರ್ನಾಟಕದ ಕುರುಬರನ್ನು ಎಸ್ಟಿ ಮೀಸಲಾತಿಗೆ ಒಳಪಡಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳನ್ನು ಆಗ್ರಹಿಸಿ ನಡೆಸಿದ ಕುರುಬರ ಐತಿಹಾಸಿಕ ಪಾದಯಾತ್ರೆ ಅಭೂತಪೂರ್ವ ಯಶಸ್ವಿಯಾಗಿದ್ದು, ಫೆ,೭ರಂದು ಬೆಂಗಳೂರಿನ ಇಂಟರ್‌ನ್ಯಾಶನಲ್‌ ಎಕ್ಸಿಬಿಶನ್‌ ಮೈದಾನದಲ್ಲಿ ಕುರುಬರ ಬೃಹತ್ ಸಮಾವೇಶ ಆಯೋಜಿಸಲಾಗಿದೆ ಎಂದು ಕಾಗಿನೆಲೆ ಮಹಾಸಂಸ್ಥಾನದ ಕನಕಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಹೇಳಿದರು.
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಪರಿಶಿಷ್ಟ ಪಂಗಡದ ಮೀಸಲಾತಿಗಾಗಿ ಹಕ್ಕೊತ್ತಾಯ ಮಾಡಲಿದ್ದೇವೆ. ಇದಕ್ಕಾಗಿ ಕಾಗಿನೆಲೆಯಿಂದ ಬೆಂಗಳೂರಿನವರೆಗೆ 340ಕಿ.ಮೀ. ಪಾದಯಾತ್ರೆಗೆ ಬೆಂಬಲ ದೊರೆತಿದೆ. ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಮೂಲಕ ಸರ್ಕಾರಿ ಸೌಲಭ್ಯಗಳು ದೊರೆಯುವಂತಾಗಬೇಕು ಎಂದು ಪ್ರದಾನಿ ನರೇಂದ್ರ ಮೋದಿ ಅವರಿಗೂ ಪತ್ರ ಬರೆಯಲಾಗಿದೆ ಎಂದು ತಿಳಿಸಿದರು.
ಫೆ.7ರಂದು ಬೆಂಗಳೂರು ಹೊರವಲಯದಲ್ಲಿರುವ ಮಾದಾವರ ಅಂತಾರಾಷ್ಟ್ರೀಯ ಪ್ರದರ್ಶನ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಸುಮಾರು 10ಲಕ್ಷಕ್ಕೂ ಹೆಚ್ಚು ಜನ ಸಮಾವೇಶದಲ್ಲಿ ಪಾಲ್ಗೊಳ್ಳಿದ್ದಾರೆ. . ಸಮುದಾಯದವರು ಈಗಾಗಲೇಬೇಡಿಕೆಯನ್ನು ಆಡಳಿತದ ಮುಂದೆ ಇಟ್ಟಿದ್ದೇವೆ. ಬೇಡಿಕೆ ಈಡೇರುತ್ತದೆ ಎಂಬ ವಿಶ್ವಾಸವಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಹೊಸದುರ್ಗ ಶಾಖಾ ಮಠದ ಈಶ್ವರಾನಂದಪುರಿ ಸ್ವಾಮೀಜಿ, ಮಾಜಿ ಸಚಿವರಾದ ಎಚ್.ವಿಶ್ವನಾಥ್, ಎಚ್.ಎಂ.ರೇವಣ್ಣ ಮುಖಂಡರಾದ ಕೆ.ವಿರೂಪಾಕ್ಷಪ್ಪ, ಕೆ.ಮುಕುಡಪ್ಪ, ಕೆ.ಇ.ಕಾಂತೇಶ್, ಟಿ.ಬಿ.ಬಳಗಾವಿ, ಸೋಮಶೇಖರ್ ಮೊದಲಾದವರಿದ್ದರು.

ಪ್ರಮುಖ ಸುದ್ದಿ :-   ಸರ್ಕಾರದಿಂದ ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್‌ ; ಇದು ಓಲೈಕೆ ರಾಜಕಾರಣ ಎಂದು ಬಿಜೆಪಿ ಕಿಡಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement