ಬೇರೆ ರಾಜ್ಯಗಳಿಂದ ವಿದ್ಯಾರ್ಥಿಗಳ ಸಮವಸ್ತ್ರ ಖರೀದಿಗೆ ಬ್ರೇಕ್

ಬೆಂಗಳೂರು: ವಿದ್ಯಾರ್ಥಿಗಳಿಗೆ ಪೂರೈಕೆ ಮಾಡುವ ಸಮವಸ್ತ್ರವನ್ನು ಬೇರೆ ರಾಜ್ಯದಿಂದ ಖರೀದಿ ಮಾಡುವುದನ್ನು ಸಂಪೂರ್ಣವಾಗಿ ಬಂದ್ ಮಾಡಲಾಗುವುದು ಎಂದು ಹೇಳಿರುವ ಜವಳಿ ಸಚಿವ ಶ್ರೀಮಂತ ಪಾಟೀಲ್, ವಿದಾನ ಪರಿಷತ್‌ನಲ್ಲಿ ಶುಕ್ರವಾರ ತಿಳಿಸಿದ್ದಾರೆ.
ಪ್ರಸಕ್ತ ಶೈಕ್ಷಣಿಕ ವರ್ಷದಿಂದ ರಾಜ್ಯದ ನೇಕಾರರಿಂದಲೇ ಸಮವಸ್ತ್ರ ಖರೀದಿಸಿ ವಿದ್ಯಾರ್ಥಿಗಳಿಗೆ ನೀಡಲಾಗುವುದು. ಕೋವಿಡ್ ಸಮಯದಲ್ಲಿ ಜವಳಿ ಉದ್ಯಮದಲ್ಲಿ ಕೆಲಸ ಮಾಡುತ್ತಿದ್ದ ಸಾವಿರಾರು ಮಂದಿ ಉದ್ಯೋಗ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ನೆರವಿಗೆ ಧಾವಿಸಲು ಸರ್ಕಾರ ಮುಂದಾಗಿದೆ ಎಂದರು.
ಆಡಳಿತ ಪಕ್ಷದ ಸದಸ್ಯೆ ಭಾರತಿ ಶೆಟ್ಟಿ ಅವರ ಪ್ರಶ್ನೆಗೆ ಉತ್ತರಿಸಿ, ಯಾವ್ಯಾವ ರಾಜ್ಯಗಳಲ್ಲಿ ನೇಕಾರರಿಂದ ಬಟ್ಟೆ ಖರೀದಿಸಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ ಎಂಬುದನ್ನು ಅಧ್ಯಯನ ಮಾಡಿ ರಾಜ್ಯದಲ್ಲೂ ಅಳವಡಿಸಿಕೊಳ್ಳಲಾಗುವುದು. ಈ ಸಂಬಂಧ ತಮಿಳುನಾಡಿಗೆ ಜವಳಿ ಆಯುಕ್ತರ ತಂಡವನ್ನು ಕಳುಹಿಸಿಕೊಟ್ಟಿದ್ದು, ಅಲ್ಲಿ ಅಧ್ಯಯನ ನಡೆಸಿದ್ದಾರೆ. ಶೀಘ್ರದಲ್ಲೇ ವರದಿ ನೀಡುವ ಸಾಧ್ಯತೆಗಳಿವೆ. ಅದನ್ನ ಅಧರಿಸಿ ಮುಂದಿನ ಕ್ರಮ ಕೈಗೊಳ್ಳಾಗುವುದು ಎಂದರು.
ಅಂಗನವಾಡಿಗೆ ಸೀರೆ ಖರೀದಿ: ರಾಜ್ಯದಲ್ಲಿ ಪ್ರಾಯೋಗಿಕವಾಗಿ ಅಂಗನವಾಡಿ ಕಾರ್ಯಕರ್ತೆಯರಿಗೆ ಏಕರೂಪದ ಎರಡೂವರೆ ಲಕ್ಷ ಸೀರೆಗಳನ್ನು ನೀಡಲು ಸರ್ಕಾರ ಮುಂದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ವಿಧಾನ ಪರಿಷತ್‌ಗೆ ತಿಳಿಸಿದ್ದಾರೆ.
ಪ್ರಾಯೋಗಿಕವಾಗಿ ಈ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಆರಂಭದಲ್ಲಿ ಒಬ್ಬರಿಗೆ ಅಥವಾ ಇಬ್ಬರಿಗೆ ಇದನ್ನು ನೀಡಲಾಗಿದೆ. ಸಣ್ಣ ಸಣ್ಣ ನೇಕಾರರಿಗೂ ಇದನ್ನು ನೀಡಬಹುದಾ ಎನ್ನುವ ಕುರಿತು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.

ಪ್ರಮುಖ ಸುದ್ದಿ :-   ಪೋಕ್ಸೋ ಪ್ರಕರಣ : ಮುರುಘಾ ಶರಣರ ಜಾಮೀನು ರದ್ದುಗೊಳಿಸಿದ ಸುಪ್ರೀಂಕೋರ್ಟ್

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement