ರಕ್ಷಣಾ ವಲಯದಲ್ಲಿ ಸ್ವಾವಲಂಬಿ ಭಾರತ ನಿರ್ಮಾಣಕ್ಕೆ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ಸಹಕಾರಿ

ಬೆಂಗಳೂರು: ರಕ್ಷಣಾ ವಲಯದಲ್ಲಿ ಸ್ವಾವಲಂಬಿ ಭಾರತ ನಿರ್ಮಾಣಕ್ಕೆ ಏರೋ ಏಂಡಿಯಾ ವೈಮಾನಿಕ ಪ್ರದರ್ಶನ ಸಹಕಾರಿಯಾಗಲಿದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ
ಏರೋ ಇಂಡಿಯಾ ವೈಮಾನಿಕ ಪ್ರದರ್ಶನದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, 13ನೇ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ರಕ್ಷಣೆ ಮತ್ತು ವೈಮಾನಿಕ ವಲಯದಲ್ಲಿ ಭಾರತದ ಶಕ್ತಿ ಸಾಮರ್ಥ್ಯವನ್ನು ಜಗತ್ತಿನ ಮುಂದೆ ತೆರೆದಿಡಲು ಇದೊಂದು ತಾಜಾ ಉದಾಹರಣೆ ಎಂದರು.
ಕಳೆದ ಆರು ವರ್ಷಗಳಲ್ಲಿ ದೇಶದಲ್ಲಿ ರಕ್ಷಣೆ, ವೈಮಾನಿಕ ಕ್ಷೇತ್ರದಲ್ಲಿ ಖಾಸಗಿ ಕಂಪನಿಗಳ ಹೂಡಿಕೆಗೆ ಹಲವು ಸುಧಾರಣೆಗಳನ್ನು ತರಲಾಗಿದೆ. ಈ ಕ್ಷೇತ್ರದಲ್ಲಿ ಹೂಡಿಕೆಗೆ ವಿಪುಲ ಅವಕಾಶಗಳಿವೆ. ಸ್ವಾವಲಂಬಿ ಭಾರತ ನಿರ್ಮಾಣಕ್ಕಾಗಿ ರಕ್ಷಣಾ ವಲಯದಲ್ಲಿ ಅನೇಕ ಸುಧಾರಣಾ ಕ್ರಮಗಳನ್ನು ತರಲಾಗಿದೆ. ಇದರಿಂದಾಗಿ ಆರ್ಥಿಕ ಚೇತರಿಕೆಗೆ ಒತ್ತು ನೀಡುವ ಜೊತೆಗೆ ಮೂಲಸೌಕರ್ಯ ಅಭಿವೃದ್ಧಿಗೂ ನೆರವಾಗಲಿದೆ ಎಂದು ಹೇಳಿದರು.
ಲಸಿಕೆ ಪೂರೈಕೆ: ಭಾರತ, ಶಾಂತಿ ಮತ್ತು ಸಹಬಾಳ್ವೆಯಲ್ಲಿ ನಂಬಿಕೆಯಿಟ್ಟಿದೆ. ಹೀಗಾಗಿಯೇ ಕೊರೋನಾ ಸೋಂಕಿನ ಸಮಯದಲ್ಲಿ ಮಾನವೀಯ ನೆಲೆಗಟ್ಟಿನಲ್ಲಿ ನೆರೆ ದೇಶಗಳಿಗೆ ಲಸಿಕೆ ಪೂರೈಕೆ ಮಾಡಿದೆ, ಮಾಡುತ್ತಿದೆ. ಇದಲ್ಲದೆ ವೈದ್ಯಕೀಯ ತಂಡ, ಔಷಧಿಗಳು, ರಕ್ಷಣಾ ಉಪಕರಣಗಳು, ವೆಂಟಿಲೇಟರ್‍ಗಳು, ಮಾಸ್ಕ್‍ಗಳು, ಗ್ಲೌಸ್‍ಗಳು ಮತ್ತು ವೈದ್ಯಕೀಯ ಉಪಕರಣಗಳನ್ನು ಪೂರೈಕೆ ಮಾಡಲಾಗಿದೆ ಎಂದು ಹೇಳಿದರು.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಇಂದಿನ ಪ್ರಮುಖ ಸುದ್ದಿ :-   ಅದಾನಿ ಗ್ರೂಪ್‌ಗೆ ಸಾಲ : ಭಾರತೀಯ ಬ್ಯಾಂಕ್‌ಗಳಿಂದ ಮಾಹಿತಿ ಕೇಳಿದ ಆರ್‌ಬಿಐ

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾತನಾಡಿ, ಏರೋ ಶೋನಲ್ಲಿ 121 ಒಪ್ಪಂದಗಳನ್ನು ಮಾಡಿಕೊಳ್ಳಲಾಗಿದೆ. ಅದರಲ್ಲಿ 19 ತಂತ್ರಜ್ಞಾನಕ್ಕೆ ಸಂಬಂಧಿಸಿದ ಒಪ್ಪಂದ , ನಾಲ್ಕು ರಕ್ಷಣಾ ಉತ್ಪಾದನೆ, 32 ಪ್ರಮುಖ ಯೋಜನೆಗಳು, ಏರೋ ಇಂಡಿಯಾಗೆ ಸಂಬಂಧಿಸಿದ 18 ಹೊಸ ಒಪ್ಪಂದ ಸೇರಿದಂತೆ ಹಲವು ಒಪ್ಪಂದಗಳನ್ನು ಮಾಡಿಕೊಳ್ಳಲಾಗಿದೆ ಎಂದರು.
ಮೂರು ದಿನಗಳ ಕಾಲ ನಡೆದ ವೈಮಾನಿಕ ಪ್ರದರ್ಶನದಲ್ಲಿ 60 ದೇಶಗಳ 500 ಕಂಪನಿಗಳು ಪಾಲ್ಗೊಂಡಿದ್ದವು. ವರ್ಚುವಲ್ ಮತ್ತು ನೇರ ಭಾಗವಹಿಸುವಿಕೆ ಮೂಲಕ 4.5 ಲಕ್ಷ ಜನರು ವೀಕ್ಷಣೆ ಮಾಡಿದ್ದಾರೆ.ಏರೋ ಇಂಡಿಯಾ ಪ್ರದರ್ಶನದಲ್ಲಿ 35 ಸಣ್ಣ, ಅತಿಸಣ್ಣ, ಮಧ್ಯಮ ವಲಯದ ಉದ್ದಿಮೆದಾರರ 203 ಕೋಟಿ ರೂಪಾಯಿ ಆದಾಯ ಗಳಿಸಿದ್ದಾರೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೇರಿದಂತೆ ರಕ್ಷಣಾ ಇಲಾಖೆಯ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

/ 5. ಒಟ್ಟು ವೋಟುಗಳು

ಇಂದಿನ ಪ್ರಮುಖ ಸುದ್ದಿ :-   ಶಂಕರಾಭರಣಂ, ಸಾಗರ ಸಂಗಮಂ, ಸ್ವಾತಿ ಮುತ್ಯಂ ಸಿನಿಮಾಗಳ ನಿರ್ದೇಶಕ, ದಾದಾ ಸಾಹೇಬ್ ಫಾಲ್ಕೆ ಪುರಸ್ಕೃತ ಕೆ.ವಿಶ್ವನಾಥ ನಿಧನ

ನಿಮ್ಮ ಕಾಮೆಂಟ್ ಬರೆಯಿರಿ

advertisement