ಶುದ್ಧ ಕುಡಿಯುವ ನೀರಿನ ಘಟಕ ಅವ್ಯವಹಾರ ತನಿಖೆಗೆ ಜಂಟಿ ಸದನ ಸಮಿತಿ

ಬೆಂಗಳೂರು: ರಾಜ್ಯದಲ್ಲಿ ಜಾರಿಯಲ್ಲಿರುವ ಶುದ್ಧ ಕುಡಿಯುವ ನೀರಿನ ಯೋಜನೆಯಲ್ಲಿ ನಡೆದಿರುವ ಅವ್ಯವಹಾರದ ಬಗ್ಗೆ ತನಿಖೆಗೆ ಜಂಟಿ ಸದನ ಸಮಿತಿ ರಚಿಸುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ವಿಧಾನ ಪರಿಷತ್‍ನಲ್ಲಿ ಸದಸ್ಯ ರಘುನಾಥ್ ಮಲ್ಕಾಪುರೆ, ಶಶಿಲ್ ಜಿ.ನಮೋಷಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸದಸ್ಯರು ಕೇಳಿದ ಪ್ರಶ್ನೆಗಳಿಗೆ ಸಾಕಷ್ಟು ಮಾಹಿತಿ ನೀಡಬೇಕಿದೆ. ಹಾಗಾಗಿ ಸದ್ಯಕ್ಕೆ ಉತ್ತರ ನೀಡಲು ಆಗುತ್ತಿಲ್ಲ. ಶುದ್ಧ ಕುಡಿಯುವ ನೀರಿನ ಘಟಕಗಳು ಆರಂಭವಾದ ದಿನಗಳಿಂದ ಎಷ್ಟು ಅನುದಾನ ಖರ್ಚು ಮಾಡಲಾಗಿದೆ, ಎಷ್ಟು ಘಟಕಗಳನ್ನು ಸ್ಥಾಪಿಸಲಾಗಿದ್ದು, ಅವುಗಳಲ್ಲಿ ಎಷ್ಟು ಕೆಟ್ಟಿವೆ.
ಎಲ್ಲೆಲ್ಲಿ ಅವ್ಯವಹಾರ ನಡೆದಿವೆ ಎಂದು ಮಾಹಿತಿ ನೀಡಲು ಸಮಯಬೇಕು. ವಿಧಾನಸಭೆಯಲ್ಲಿ ಈ ವಿಷಯ ಚರ್ಚೆಯಾಗಿದೆ. ಶುದ್ಧ ಕುಡಿಯುವ ನೀರಿನ ಘಟಕಗಳ ಅವ್ಯವಹಾರಗಳ ಬಗ್ಗೆ ಜಂಟಿ ಸದನ ಸಮಿತಿ ರಚನೆ ಮಾಡುವುದಾಗಿ ಅಲ್ಲಿ ಪ್ರಕಟಿಸಿದ್ದೇವೆ ಎಂದು ಮೇಲ್ಮನೆ ಗಮನಕ್ಕೆ ತಂದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement