2,464 ಕೋಟಿ ರೂ. ಮೊತ್ತದ 34 ಒಪ್ಪಂದಗಳಿಗೆ ಸಹಿ

ಬೆಂಗಳೂರು: ಏಷ್ಯಾದಲ್ಲೇ ಅತಿ ದೊಡ್ಡ ಏರೋಸ್ಪೇಸ್‌ ಹಬ್‌ ಆಗಿರುವ ಕರ್ನಾಟಕ,ಹಾಗೂ ಮೂರು ದಿನಗಳಿಂದ ಬೆಂಗಳೂರಿನಲ್ಲಿ ನಡೆದ ವೈಮಾನಿಕ ಪ್ರದರ್ಶನದಲ್ಲಿ ಏರೋಸ್ಪೇಸ್ ಮತ್ತು ರಕ್ಷಣಾ ಉದ್ಯಮಗಳಿಗೆ ಸಂಬಂಧಿಸಿದ 2,464 ಕೋಟಿ ರೂ. ಮೊತ್ತದ 34 ಒಪ್ಪಂದಗಳಿಗೆ ಶುಕ್ರವಾರ ಸಹಿ ಹಾಕಲಾಗಿದೆ.
ಯಲಹಂಕ ವಾಯುನೆಲೆಯಲ್ಲಿ ನಡೆಯುತ್ತಿರುವ ಏರೋ ಇಂಡಿಯಾ 2021ರಲ್ಲಿ ಒಪ್ಪಂದಗಳಿಗೆ ಸಹಿ ಹಾಕಲಾಯಿತು. ಈ ವೇಳೆ ಮಾತನಾಡಿದ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಜಗದೀಶ ಶೆಟ್ಟರ್‌, ” ಏರೋಸ್ಪೇಸ್‌ ಮತ್ತು ರಕ್ಷಣಾ ಉದ್ಯಮದಲ್ಲಿ ರಾಜ್ಯದ ಸಾಮರ್ಥ್ಯವನ್ನು ಜಗತ್ತಿಗೆ ಪರಿಚಯಿಸುವ ಪ್ರಯತ್ನವಾಗಿ ಈ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ,” ಎಂದರು
ಏರೋಸ್ಪೇಸ್ ಮತ್ತು ರಕ್ಷಣಾ ಕಂಪನಿಗಳಿಗೆ ರಾಜ್ಯದಲ್ಲಿ ಈಗಾಗಲೇ ಪೂರಕ ಪರಿಸರ ವ್ಯವಸ್ಥೆ ಇದ್ದು, ಈ ಕೈಗಾರಿಕಾ ವಲಯಗಳಲ್ಲಿ ಅಗತ್ಯ ಭೂಮಿಯೂ ಇದೆ’ಎಂದು ಅವರು ತಿಳಿಸಿದರು.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement