ತಮ್ಮ ಅಹಂಕಾರಕ್ಕೆ ರೈತರಿಗೆ ಅನ್ಯಾಯ ಮಾಡಿದ ಮಮತಾ:ನಡ್ಡಾ

ಮಾಲ್ಡಾ (ಪಶ್ಚಿಮ ಬಂಗಾಳ): ರಾಜ್ಯದಲ್ಲಿ ನಡೆಯುವ ವಿಧಾನಸಭಾ ಚುನಾವಣೆಯ ಪ್ರಚಾರಕ್ಕಾಗಿ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಶನಿವಾರ ಮಾಲ್ಡಾದಲ್ಲಿ ಭರ್ಜರಿ ರೋಡ್‌ ಶೋ ನಡೆಸಿದರು.
ರಾಜ್ಯ ಬಿಜೆಪಿ ಅಧ್ಯಕ್ಷ ದಿಲೀಪ್‌ ಘೋಷ್‌ ಹಾಗೂ ಇತರ ಮುಖಂಡರೊಂದಿಗೆ ಅಲಂಕರಿಸಿದ ಲಾರಿಯಲ್ಲಿ ರೋಡ್‌ ಶೋದಲ್ಲಿ ಪಾಲ್ಗೊಂಡರು. ಘೋರಾ ಮೋರ್‌ ಹಾಗೂ ರವೀಂದ್ರನಾಥ ಟ್ಯಾಗೋರ್‌ ಪ್ರತಿಮೆ ಮಧ್ಯೆ ೧ ಕಿ.ಮೀ. ಉದ್ದದ ರೋಡ್‌ ಶೋದಲ್ಲಿ ಸಹಸ್ರಾರು ಜನರು ಪಾಲ್ಗೊಂಡರು. ಸಹಸ್ರಾರು ಜನರು ಮನೆಯ ಛಾವಣಿಗಳು ಹಾಗೂ ಬಾಲ್ಕನಿಗಳಲ್ಲಿ ನಿಂತು ಮೆರವಣಿಗೆಯನ್ನು ವೀಕ್ಷಿಸಿದರು.
ಈ ಸಂದರ್ಭದಲ್ಲಿ ನಡ್ಡಾ ಮಾತನಾಡಿ, ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗಿದೆ. ರೈತರ ಅಭ್ಯುದಯ ನಮ್ಮ ಗುರಿಯಾಗಿದ್ದು, ರೈತರ ಆದಾಯವನ್ನು ದ್ವಿಗುಣಗೊಳಿಸಲು ನಾವು ಬದ್ಧರಾಗಿದ್ದೇವೆ ಎಂದರು.
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಮ್ಮ ಅಹಂಕಾರದಿಂದ  ರೈತರಿಗೆ ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಿದ ನಡ್ಡಾ, ತೃಣಮೂಲ ಕಾಂಗ್ರೆಸ್ ಮುಖ್ಯಸ್ಥರ ಮೊಂಡುತನದಿಂದಾಗಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅನುಷ್ಠಾನಗೊಳ್ಳುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು.

ಮಾಲ್ಡಾದಲ್ಲಿ ನಡ್ಡಾ ಅವರ ಪೋಸ್ಟರ್‌ಗಳನ್ನು ಕಿತ್ತು ಹಾಕಿದ್ದು ಬಿಜೆಪಿ ಹಾಗೂ ಟಿಎಂಸಿ ಮಧ್ಯೆಆರೋಪ ಹಾಗೂ ಪ್ರತ್ಯಾರೋಪಕ್ಕೆ ಕಾರಣವಾಗಿತ್ತು.

ಪ್ರಮುಖ ಸುದ್ದಿ :-   ಅತ್ಯಧಿಕ ಅಪಾಯದ ಮಟ್ಟ 6ರ ವಿರುದ್ಧ ರಕ್ಷಣೆಗಾಗಿ ದೇಶದ ಅತ್ಯಂತ ಹಗುರ ಬುಲೆಟ್ ಪ್ರೂಫ್ ಜಾಕೆಟ್‌ ಅಭಿವೃದ್ಧಿಪಡಿಸಿದ ಡಿ ಆರ್‌ ಡಿ ಒ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement