ದೆಹಲಿಯಲ್ಲಿ ೫೦ ರೈತರ ಬಂಧನ

ನವದೆಹಲಿ: ಕೃಷಿ ಕಾಯ್ದೆ ವಿರೋಧಿಸಿ ರೈತರು ರಾಜಧಾನಿಯ ಹಲವೆಡೆ ನಡೆಸಿದ ಚಕ್ಕಾ ಬಂದ್ ವೇಳೆ ಶಾಹೀದ್ ಪಾರ್ಕ್ ನಲ್ಲಿ 50 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಎರಡು ತಿಂಗಳಿಗೂ ಹೆಚ್ಚು ಕಾಲದಿಂದ ಕಾಯ್ದೆ ವಾಪಸ್ಸಿಗೆ ಬಿಗಿಪಟ್ಟು ಹಿಡಿದು ಪ್ರತಿಭಟನೆ ನಡೆಸುತ್ತಿರುವ ರೈತರು ಶನಿವಾರ ದೇಶವ್ಯಾಪಿ ಕರೆ ನೀಡಿದ್ದ ರಸ್ತೆ ತಡೆಗೆ ವ್ಯಾಪಕ ಪ್ರತಿಕ್ರಿಯೆ ವ್ಯಕ್ತವಾಯಿತು.
ದೆಹಲಿಯ ಶಾಹಿದ್ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ 50 ಮಂದಿ ರೈತರನ್ನು ಬಂಧಿಸಲಾಗಿದೆ.
ಅನ್ನದಾತರು ನಡೆಸುತ್ತಿರುವ ಈ ಪ್ರತಿಭಟನೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸಂಸತ್ತಿನಲ್ಲಿ ಪ್ರತಿ ಪಕ್ಷಗಳು ಸರ್ಕಾರದ ವಿರುದ್ದ ಮುಗಿಬಿದ್ದು ಕಲಾಪಕ್ಕೆ ಅಡ್ಡಿಪಡಿಸಿವೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ