ಪಂಚಮಸಾಲಿಗೆ 2ಎ ಮೀಸಲು: ವರದಿ ಬಂದ ನಂತರ ಕ್ರಮ

ಬೆಂಗಳೂರು: ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ಕುರಿತು ಹಿಂದುಳಿದ ವರ್ಗಗಳ ಆಯೋಗದ ವರದಿ ಬಂದ ನಂತರ ಸರ್ಕಾರ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹಿಂದುಳಿದ ವರ್ಗಗಳ ಆಯೋಗಕ್ಕೆ ಪ್ರಸ್ತಾವನೆ ಕಳುಹಿಸಿಕೊಟ್ಟಿದ್ದಾರೆ. ಆಯೋಗದಿಂದ ಶಿಫಾರಸು ಬಂದ ಕೂಡಲೇ ಕ್ರಮ ಕೈಗೊಳ್ಳಲಾಗುವುದು ಎಂದರು.
ಪಂಚಮಸಾಲಿ ಲಿಂಗಾಯತ ಸಮುದಾಯವನ್ನು ಹಿಂದುಳಿದ ವರ್ಗ ಎಂದು ಗುರುತಿಸಿದವರೇ ಯಡಿಯೂರಪ್ಪನವರು. ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗಲೂ ಪಂಚಮಸಾಲಿ ಲಿಂಗಾಯತ ಸಮಯದಾಯವನ್ನು 3ಎಗೆ ಸೇರಿಸಿದ್ದವರು ಅವರೇ. ಈಗ 2ಎ ಮೀಸಲಾತಿಗೆ ಪ್ರಸ್ತಾವನೆ ಬಂದಿದೆ. ಈ ಪ್ರಸ್ತಾವನೆಯನ್ನು ಮುಖ್ಯಮಂತ್ರಿಗಳು ಹಿಂದುಳಿದ ವರ್ಗಗಳ ಆಯೋಗಕ್ಕೆ ಕಳಿಸಿಕೊಟ್ಟಿದ್ದಾರೆ. ಆಯೋಗದ ವರದಿ ಬಂದ ನಂತರ ಕ್ರಮ ಕೈಗೊಳ್ಳಲಿದ್ದಾರೆ ಎಂದು ಪುನರುಚ್ಚರಿಸಿದರು.
ಪಂಚಮಸಾಲಿ ಲಿಂಗಾಯತ ಸಮುದಾಯವನ್ನು 2ಎಗೆ ಸೇರಿಸಬೇಕೆಂಬ ಬೇಡಿಕೆಯನ್ನು ಕಾನೂನಾತ್ಮಕವಾಗಿ ಕ್ರಮ ತೆಗೆದುಕೊಳ್ಳ ಬೇಕಾಗುತ್ತದೆ. ಕೆಲವು ರಾಜ್ಯಗಳು ಇದೇ ಪ್ರಸ್ತಾವನೆ ಮಾಡಿದಾಗ ಕೋರ್ಟ್ ತಡೆ ಕೊಟ್ಟಿರುವುದೂ ಉಂಟು. ಇದೆಲ್ಲವನ್ನೂ ಗಮನಿಸಬೇಕಾಗುತ್ತದೆ ಎಂದರು..

ಪ್ರಮುಖ ಸುದ್ದಿ :-   ಅತ್ಯಾಚಾರ ಆರೋಪ: ಮಾಜಿ ಸಚಿವ ವಿನಯ ಕುಲಕರ್ಣಿ ವಿರುದ್ಧ ಎಫ್‌ಐಆ‌ರ್

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement