ನವದೆಹಲಿ:ದೇಶದಲ್ಲಿ ಕೊರೋನಾ ಸೋಂಕಿಗೆ ಮೊದಲ ಹಂತದಲ್ಲಿ ಲಸಿಕೆ ಪಡೆದವರಿಗೆ ಫೆ.13ರಿಂದ ೨ನೇ ಹಂತದ ಲಸಿಕೆ ಹಾಕಲು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮುಂದಾಗಿದೆ
ಜನವರಿ 16 ರಂದು ಆರಂಭವಾದ ಮೊದಲ ಹಂತದ ಲಸಿಕಾ ಕಾರ್ಯಕ್ರಮಕ್ಕೆ ದೇಶದಲ್ಲಿಯೇ ಅಭೂತಪೂರ್ವ ಯಶಸ್ಸು ಸಿಕ್ಕಿದೆ.ಈ ಹಿನ್ನೆಲೆಯಲ್ಲಿ ಎರಡನೇ ಡೋಸ್ ಲಸಿಕೆ ಹಾಕುವ ಕಾರ್ಯ ಫೆ.13ರಿಂದ ಆರಂಭವಾಗಲಿದೆ ಎಂದು ತಿಳಿಸಲಾಗಿದೆ.ಕೇವಲ 21 ದಿನಗಳಲ್ಲಿ ದೇಶದಲ್ಲಿ ೫೩ ಲಕ್ಷಕ್ಕೂ ಅಧಿಕ ಮಂದಿಗೆ ಲಸಿಕೆ ಹಾಕಲಾಗಿದೆ ಎಂದು ಸಚಿವಾಲಯ ತಿಳಿಸಿದೆ.
ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಲಸಿಕೆ ಹಾಕುವ ಕಾರ್ಯ ದಲ್ಲಿ ಶೇಕಡಾ 60ರಷ್ಟು ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿ ಕಾರ್ಯಪಡೆಯ ಸಿಬ್ಬಂದಿ ಲಸಿಕೆ ಪಡೆದಿದ್ದಾರೆ ಎಂದು ಸರ್ಕಾರ ತಿಳಿಸಿದೆ
ಮೊದಲ ಹಂತದ ಲಸಿಕೆ ಪಡೆದಿರುವವರಿಗೆ ಫೆ.೨೦ರ ವರೆಗೆ ೨ನೇ ಹಂತದ ಡೋಸ್ ಲಸಿಕೆ ಹಾಗಬೇಕಾಗಿದೆ. ೨ನೇ ಹಂತದ ಕೊರೋನಾ ಸೋಂಕಿಗೆ ಲಸಿಕೆ ಹಾಕಿಸಿಕೊಂಡ ಹದಿನೈದು-ಇಪ್ಪತ್ತು ದಿನದ ನಂತರ ರೋಗನಿರೋಧಕ ಶಕ್ತಿ ಹೆಚ್ಚಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ
ನಿಮ್ಮ ಕಾಮೆಂಟ್ ಬರೆಯಿರಿ