ಬೆಂಗಳೂರು: ಪ್ರಸ್ತುತ ಶೈಕ್ಷಣಿಕ ವರ್ಷದ ಶಾಲಾ ಕಾಲೇಜುಗಳು ತಡವಾಗಿ ಆರಂಭವಾಗಿರುವ ಹಿನ್ನೆಲೆಯಲ್ಲಿ ತರಗತಿಗಳ ದಾಖಲಾತಿಯನ್ನು ಫೆ.20ರ ವರೆಗೆ ವಿಸ್ತರಿಸಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸೂಚನೆ ನೀಡಿದ್ದಾರೆ.
ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಶಾಲಾ-ಕಾಲೇಜುಗಳು ಫೆ. 1ರಿಂದ ಪೂರ್ಣ ಪ್ರಮಾಣದಲ್ಲಿ ಪ್ರಾರಂಭಗೊಂಡಿವೆ. 9ರಿಂದ 12ನೇ ತರಗತಿವರೆಗೆ ಭೌತಿಕ ತರಗತಿಗಳು ಆರಂಭವಾಗಿದ್ದರೆ, ಉಳಿದ ತರಗತಿಗಳು ಪರ್ಯಾಯ ಬೋಧನೆಯಲ್ಲಿ ನಡೆಯುತ್ತಿವೆ. ಈ ವರ್ಷದ ದಾಖಲಾತಿಗೆ ಫೆಬ್ರವರಿ 6 ಕಡೆಯ ದಿನವಾಗಿದ್ದು, ಹಲವಾರು ವಿದ್ಯಾರ್ಥಿಗಳಿಗೆ ಇನ್ನೂ ತರಗತಿಗಳಿಗೆ ದಾಖಲಾಗಲು ಸಾಧ್ಯವಾಗಿಲ್ಲ. ಈ ವರ್ಷ ತರಗತಿಗಳು ತಡವಾಗಿ ಪ್ರಾರಂಭವಾಗಿರುವುದರಿಂದ ದಾಖಲಾತಿಗೆ ಸಮಯ ನೀಡಬೇಕೆಂದು ಕೋರಿ ರಾಜ್ಯದ ವಿವಿಧ ಭಾಗಗಳಿಂದ ವಿದ್ಯಾರ್ಥಿಗಳು, ಪೋಷಕರು ಮತ್ತು ಜನಪ್ರತಿನಿಧಿಗಳಿಂದ ಪ್ರಸ್ತಾವನೆಗಳು ಬಂದಿವೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಾಖಲಾತಿಯನ್ನು ಫೆ. 20ರ ವರೆಗೆ ವಿಸ್ತರಿಸಬೇಕು ಎಂದು ಸಚಿವರು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರಿಗೆ ಟಿಪ್ಪಣಿಯಲ್ಲಿ ಸೂಚನೆ ನೀಡಿದ್ದಾರೆ.
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155
ನಿಮ್ಮ ಕಾಮೆಂಟ್ ಬರೆಯಿರಿ