ವರದಕ್ಷಿಣೆ ಕಿರುಕುಳ: ಪತಿ ವಿರುದ್ಧ ಮಹಿಳಾ ಐಪಿಎಸ್‌ ಅಧಿಕಾರಿ ದೂರು

ಬೆಂಗಳೂರು: ರಾಜ್ಯದ ಹಿರಿಯ ಮಹಿಳಾ ಐಪಿಎಸ್ ಅಧಿಕಾರಿಯೊಬ್ಬರು ತಮ್ಮ ಪತಿ ಮತ್ತು ಕುಟುಂಬದ ವಿರುದ್ಧ ವರದಕ್ಷಿಣೆ ಕಿರುಕುಳ ನೀಡುತ್ತಿರುವ ಬಗ್ಗೆ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್ ತಮ್ಮ ಪತಿ ಐಎಫ್ಎಸ್ ಅಧಿಕಾರಿ ನಿತಿನ್ ಸುಭಾಷ್  ಸೇರಿದಂತೆ ಏಳು ಜನರ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
2011ರಲ್ಲಿ ವರ್ತಿ ಹಾಗೂ ನಿತಿನ್ ವಿವಾಹವಾಗಿತ್ತು. ಪತಿ ಹಾಗೂ ಕುಟುಂಬದವರು ವರದಕ್ಷಿಣೆಗಾಗಿ ತನಗೆ ಹಿಂಸೆ ನೀಡುತ್ತಿದ್ದು, ದೈಹಿಕವಾಗಿ ದೌರ್ಜನ್ಯ ಮಾಡಿದ್ದಾರೆ. ವರದಕ್ಷಿಣೆ ನೀಡದಿದ್ದರೆ ವಿಚ್ಛೇದನದ ಬೆದರಿಕೆಯನ್ನೂ ನೀಡುತ್ತಿದ್ದಾರೆ ಎಂದು ವರ್ತಿಕಾ ಕಟಿಯಾರ್‌ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಡಿ.ಕೆ. ಶಿವಕುಮಾರ ವಿರುದ್ಧ ಎಫ್ ಐಆರ್ ದಾಖಲು

ನಿಮ್ಮ ಕಾಮೆಂಟ್ ಬರೆಯಿರಿ

advertisement