ನವದೆಹಲಿ: ಹೊಸ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟಿಸುತ್ತಿರುವ ರೈತರು ಹಾಗೂ ಭಾರತೀಯ ಅಧಿಕಾರಿಗಳು ಮನವ ಹಕ್ಕುಗಳಿಗೆ ಧಕ್ಕೆಯಾಗದಂತೆ ಸಂಯಮದಿಂದ ನಡೆದುಕೊಳ್ಳಬೇಕೆಂದು ವಿಶ್ವಸಂಸ್ಥೆ ಮಾನವ ಹಕ್ಕುಗಳ ಕಚೇರಿ ತಿಳಿಸಿದೆ.
ಎಲ್ಲರಿಗೂ ಮಾನವ ಹಕ್ಕುಗಳಿಗೆ ಸಂಬಂಧಿಸಿದಂತೆ “ಸಮನಾದ ಪರಿಹಾರಗಳನ್ನು” ಕಂಡುಹಿಡಿಯುವುದು ನಿರ್ಣಾಯಕವಾಗಿದೆ. ಶಾಂತಿಯುತ ಸಭೆ ಮತ್ತು ಅಭಿವ್ಯಕ್ತಿಗೆ ಮಾನವ ಹಕ್ಕುಗಳನ್ನು ಆಫ್‌ಲೈನ್ ಮತ್ತು ಆನ್‌ಲೈನ್‌ನಲ್ಲಿ ರಕ್ಷಿಸಬೇಕು ಎಂದು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಹೈ ಕಮಿಷನರ್ ಕಚೇರಿ ಟ್ವೀಟ್ ಮಾಡಿದೆ.
ನಿಮ್ಮ ಕಾಮೆಂಟ್ ಬರೆಯಿರಿ