ಸಭಾಪತಿ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಸೀರ್ ಅಹಮ್ಮದ್ ..?

ಬೆಂಗಳೂರು: ವಿಧಾನಪರಿಷತ್‍ನ ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್ಫೆ.೯ರಂದು ನಡೆಯವ ಚುನಾವಣೆಯಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸುವುದು ಬಹುತೇಕ ನಿಚ್ಚಳವಾಗಿದೆ.
ಪ್ರತಾಪ್‍ಚಂದ್ರಶೆಟ್ಟಿ ಅವರ ರಾಜೀನಾಮೆಯಿಂದ ತೆರವಾಗಿರುವ ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಸೋಮವಾರದಿಂದ ಚುನಾವಣಾ ಪ್ರಕ್ರಿಯೆಗಳು ಆರಂಭಗೊಳ್ಳಲಿದ್ದು, ಸೋಮವಾರ 12 ಗಂಟೆಯೊಳಗೆ ನಾಮಪತ್ರ ಸಲ್ಲಿಸಬೇಕಾಗಿದೆ. ಮಂಗಳವಾರ ನೂತನ ಸಭಾಪತಿ ಆಯ್ಕೆಗೆ ಚುನಾವಣೆ ನಡೆಯಲಿದೆ.

ಬಹುತೇಕ ಸಂದರ್ಭಗಳಲ್ಲಿ ಸಭಾಪತಿಯವರನ್ನು ಅವಿರೋಧ ಆಯ್ಕೆ ಮಾಡುವ ಸಂಪ್ರದಾಯವಿದ್ದು, ಈ ಮೊದಲು ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಕಾಂಗ್ರೆಸ್ ಪ್ರತಾಪ್‍ಚಂದ್ರಶೆಟ್ಟಿ ಅವರನ್ನು ಸಭಾಪತಿಯನ್ನಾಗಿ ಆಯ್ಕೆ ಮಾಡಿಕೊಂಡರೆ, ಜೆಡಿಎಸ್‍ನ ಎಸ್.ಎಲ್.ಧರ್ಮೇಗೌಡ ಅವರನ್ನು ಉಪಸಭಾಪತಿಯನ್ನಾಗಿ ಆಯ್ಕೆ ಮಾಡಲಾಗಿತ್ತು.
ಆದರೆ ಪರಿಷತ್‌ನಲ್ಲಿ ಜೆಡಿಎಸ್‌ ಪಕ್ಷವು ಬಿಜೆಪಿ ಜೊತೆ ಕೈಜೋಡಿಸಿದ ನಂತರ ವಿಧಾನಪರಿಷತ್‍ನಲ್ಲಿ ಕಾಂಗ್ರೆಸ್‍ನ ಸಂಖ್ಯಾಬಲ ಕುಗ್ಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಸಭಾಪತಿ ಪ್ರತಾಪ್ಚಂದ್ರ ಶೆಟ್ಟಿ ವರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿತ್ತು. ಈ ನಡುವೆ ಎಸ್.ಎಲ್.ಧರ್ಮೇಗೌಡ ಆತ್ಮಹತ್ಯೆ ಮಾಡಿಕೊಂಡಿದ್ದರಿಂದ ತೆರವಾದ ಉಪಸಭಾಪತಿ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಮಾಡಿಕೊಂಡು ಬಿಜೆಪಿಯ ಎಂ.ಕೆ.ಪ್ರಾಣೇಶ್ ಆಯ್ಕೆಯಾಗಿದ್ದರು.ನಂತರದ ಬೆಳವಣಿಗೆಯಲ್ಲಿ ಪ್ರತಾಪಚಂದ್ರ ಶೆಟ್ಟಿ ಸಭಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನಡೆಯಲಿರುವ ಚುನಾವಣೆಯಲ್ಲಿ ಬಹುತೇಕವಾಗಿ ಬಸವರಾಜ ಹೊರಟ್ಟಿ ಬಹುತೇಕವಾಗಿ ಬಿಜೆಪಿ-ಜೆಡಿಎಸ್‌ ಮೈತ್ರಿಕೂಟದ ಅಭ್ಯರ್ಥಿಯಾಗಲಿದ್ದಾರೆ. ಕಾಂಗ್ರೆಸ್‍ ಪಕ್ಷವು ಸದಸ್ಯರಾದ ನಸೀರ್ ಅಹಮ್ಮದ್ ಅವರನ್ನು ಸ ಅಭ್ಯರ್ಥಿಯಾಗಿ ಕಣಕ್ಕಿಳಿಸುವುದು ಬಹುತೇಕ ಖಚಿತವಾಗಿದೆ.

ಪ್ರಮುಖ ಸುದ್ದಿ :-   ಕರ್ನಾಟಕದಲ್ಲಿ 400 ಪಶುವೈದ್ಯಾಧಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನ : ಅರ್ಜಿ ಸಲ್ಲಿಸಲು ಜೂನ್‌ 24 ಕೊನೆಯ ದಿನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement