ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಬಸವರಾಜ ಹೊರಟ್ಟಿ ಸೋಮವಾರ ನಾಮಪತ್ರ ಸಲ್ಲಿಸಲಿದ್ದಾರೆ.
ಸೋಮವಾರ ಬೆಳಗ್ಗೆ ನಾಮಪತ್ರ ಸಲ್ಲಿಸಲು ಸಮಯ ನಿಗದಿಪಡಿಸಲಾಗಿದೆ ಎಂದು ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಸ್ವತಃ ತಿಳಿಸಿದ್ದಾರೆ.
ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಮುಹೂರ್ತ ನಿಗದಿ ಮಾಡಿದ್ದಾರೆ. ರೇವಣ್ಣ ಅವರ ಸಲಹೆಯಂತೆ ಸೋಮವಾರ ಬೆಳಗ್ಗೆ 10.15 ರಿಂದ 10.30 ರೊಳಗೆ ನಾಮಪತ್ರ ಸಲ್ಲಿಸುತ್ತೇನೆ. ಈ ಶುಭ ಘಳಿಗೆಯಲ್ಲಿ ನಾಮಪತ್ರ ಸಲ್ಲಿಸುವಂತೆ ರೇವಣ್ಣ ಸಲಹೆ ನೀಡಿದ್ದಾರೆ ಎಂದು ಹೇಳಿದರು.
ಕಾಂಗ್ರೆಸ್ ನಿಂದ ನಸೀರ್ ಅಹಮದ್ ನಾಮಪತ್ರ ಸಲ್ಲಿಸುತ್ತಾರೆ ಎಂಬ ಮಾಹಿತಿ ಇದೆ. ಆದರೆ ಖಚಿತವಾಗಿಲ್ಲ ಎಂದು ತಿಳಿಸಿದರು.
ಪಕ್ಷ ಸಂಘಟನೆಯನ್ನು ಬಹಳ ಗಂಭೀರವಾಗಿ ಪರಿಗಣಿಸಿದ್ದೇವೆ. ಈಗಾಗಲೇ ಜಿಲ್ಲಾವಾರು ಸಭೆಗಳು ಆರಂಭವಾಗಿವೆ. ಆಡಳಿತಾರೂಢ ಪಕ್ಷಗಳ ವೈಫಲ್ಯಗಳನ್ನು ಮುಂದಿಟ್ಟುಕೊಂಡು ಹೋರಾಟ ಮಾಡುತ್ತೇವೆ ಎಂದರು.
ನಿಮ್ಮ ಕಾಮೆಂಟ್ ಬರೆಯಿರಿ