ರೈತರು ಎಪಿಎಂಸಿ ಕೈಗೊಂಬೆ ಆಗುವುದು ಬೇಡ

ಮೈಸೂರು: ದೇಶಕ್ಕೆ ಸ್ವಾತಂತ್ರ್ಯ ಬಂದಿದ್ದರೂ ಇನ್ನೂ ರೈತನಿಗೆ ಸ್ವಾತಂತ್ರ್ಯ ಸಿಕ್ಕಿರಲಿಲ್ಲ. ಆದರೆ ಈಗ ರೈತ ಬೆಳೆದ ಬೆಳೆಯನ್ನು ಮುಕ್ತವಾಗಿ ಮಾರಾಟ ಮಾಡಲು ಅವಕಾಶ ಕಲ್ಪಿಸಿದ್ದೇವೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹೇಳಿದರು.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರಿಗೆ ಬೆಂಬಲ ಬೆಲೆ ನೀಡಿದ್ದು ಮೋದಿ ಸರ್ಕಾರ. ರೈತರು ಎಪಿಎಂಸಿ ಕೈಗೊಂಬೆ ಆಗುವುದು ಬೇಡ ಎಂಬ ಕಾರಣಕ್ಕೆ ಬೆಳೆಯನ್ನು ಸ್ವತಂತ್ರವಾಗಿ ಮಾರಾಟ ಮಾಡಲು ಅವಕಾಶ ನೀಡಲಾಗಿದೆ. ಆದರೆ, ಇದನ್ನು ಅರ್ಥ ಮಾಡಿಕೊಳ್ಳದೆ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ನೂತನ ಕೃಷಿ ನೀತಿಯಿಂದ ರೈತರು ಬಂಡವಾಳ ಶಾಹಿಗಳ ಕೈಗೊಂಬೆಯಾಗುತ್ತಾರೆ ಎಂಬುದು ಸುಳ್ಳು. ಪಟ್ಟಭದ್ರ ಹಿತಾಸಕ್ತಿಗಳಿಂದ ಹೋರಾಟ ನಡೆಯುತ್ತಿದೆ. .
ಮಾತುಕತೆ ವೇಳೆ ಯಾವುದನ್ನೂ ಒಪ್ಪಿಕೊಳ್ಳದೆ ಸಭೆಯನ್ನು ವಿಫಲಗೊಳಿಸುತ್ತಿದ್ದಾರೆ ಎಂದರು.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ ; ತಕ್ಷಣವೇ ಸಿಪಿಆರ್‌ ಮಾಡಿ ಜೀವ ಉಳಿಸಿದ ಮತದಾನ ಮಾಡಲು ಬಂದಿದ್ದ ವೈದ್ಯ

ನಿಮ್ಮ ಕಾಮೆಂಟ್ ಬರೆಯಿರಿ

advertisement