ಕೇರಳ ಚುನಾವಣೆಯಲ್ಲಿ ಶಬರಿಮಲೆ ಕಾರ್ಡ್‌ ಬಳಸಲು ಕಾಂಗ್ರೆಸ್‌ ಚಿಂತನೆ

ಮುಂಬರಲಿರುವ ಕೇರಳ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಶಬರಿಮಲೆ ಕಾರ್ಡ್‌ ಬಳಸಲು ಕಾಂಗ್ರೆಸ್‌ ಮುಂದಾಗಿದೆ.
ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ ಯುಡಿಎಫ್ ಅಧಿಕಾರಕ್ಕೆ ಬಂದರೆ ಶಬರಿಮಲೆ ದೇವಾಲಯದ ಪದ್ಧತಿಗಳ ರಕ್ಷಣೆಗೆ ಕಾನೂನನ್ನು ಜಾರಿಗೆ ತರಲಿದೆ ಎಂದು ಹೇಳಿದರು.
ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಶಾಸಕ ತಿರುವಂಚೂರು ರಾಧಾಕೃಷ್ಣನ್ ಬಿಡುಗಡೆ ಮಾಡಿದ ‘ಕರಡು ಪ್ರತಿಯಲ್ಲಿ ಶಬರಿಮಲೆ ದೇವಾಲಯದ ಆಚರಣೆಗಳ ಉಲ್ಲಂಘನೆ ಮಾಡಿದರೆ ಎರಡು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದು ಎಂದು ಉಲ್ಲೇಖಿಸಲಾಗಿದೆ. ನಾವು ಅಧಿಕಾರಕ್ಕೆ ಬಂದರೆ ಕಾನೂನನ್ನು ಜಾರಿಗೊಳಿಸುತ್ತೇವೆ. ತಂತ್ರಿಗಳೊಂದಿಗೆ ಚರ್ಚಿಸಿ ಈ ಪ್ರಾಸ್ತಾವಿತ ಕಾನೂನಿನಡಿಯಲ್ಲಿ ಶಬರಿಮಲೆಗೆ ಅನಧಿಕೃತ ಪ್ರವೇಶ ನಿಷೇಧಿಸಲಾಗುವುದು, ಹಾಗೂ ಅಲ್ಲಿನ ಪದ್ಧತಿಗಳು ಅಥವಾ ಆಚರಣೆಗಳ ಉಲ್ಲಂಘನೆಗೆ ಎರಡು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದು ಎಂದು ರಾಧಾಕೃಷ್ಣನ್ ಕೊಟ್ಟಾಯಂನಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ಯುಡಿಎಫ್‌ನ ಕರಡು ಕಾನೂನಿಗೆ ಪ್ರತಿಕ್ರಿಯಿಸಿದ ಸಿಪಿಐ (ಎಂ) ರಾಜ್ಯ ಕಾರ್ಯದರ್ಶಿ ಎ ವಿಜಯರಾಘವನ್, ಯುಡಿಎಫ್ ಜನರನ್ನು ಮರುಳು ಮಾಡುತ್ತಿದೆ ಎಂದು ಹೇಳಿದ್ದು ಸುಪ್ರೀಂ ಕೋರ್ಟ್‌ನ ಪರಿಗಣನೆಯಲ್ಲಿರುವ ವಿಷಯದಲ್ಲಿ ಕಾನೂನನ್ನು ರೂಪಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಕೇರಳ ಸರ್ಕಾರವು 10 ರಿಂದ 50 ವರ್ಷದೊಳಗಿನ ಮಹಿಳೆಯರನ್ನು ದೇವಾಲಯ ಪ್ರವೇಶಕ್ಕೆ ಅನುಮತಿ ನೀಡಿರುವುದರ ವಿರುದ್ಧ ಬಲಪಂಥೀಯ ಮತ್ತು ಬಿಜೆಪಿ ಕಾರ್ಯಕರ್ತರ ಪ್ರತಿಭಟನೆಗೆ ಸಾಕ್ಷಿಯಾಗಿತ್ತು. ಅನೇಕ ಪರಿಶೀಲನಾ ಅರ್ಜಿಗಳು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಉಳಿದಿವೆ ಮತ್ತು ಅದನ್ನು ಆಲಿಸಲು ಸಂವಿಧಾನ ಪೀಠವನ್ನು ರಚಿಸಲಾಗಿದೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಇಂದಿನ ಪ್ರಮುಖ ಸುದ್ದಿ :-   ದೆಹಲಿ ಶ್ರದ್ಧಾ ವಾಕರ್‌ ಕೊಲೆ ಪ್ರಕರಣ : ಗ್ರೈಂಡರ್‌ನಲ್ಲಿ ಮೂಳೆಗಳನ್ನು ಸಣ್ಣಗೆ ಪುಡಿ ಮಾಡಿ ಎಸೆದಿದ್ದ-ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

/ 5. ಒಟ್ಟು ವೋಟುಗಳು

ನಿಮ್ಮ ಕಾಮೆಂಟ್ ಬರೆಯಿರಿ

advertisement