ಭಾರತ್ ಮಾತಾ ಕೀ ಜೈ ಎಂದು ಕೂಗಿದರೆ ಮಮತಾಗೆ ಕೋಪ:ಪ್ರಧಾನಿ ವಾಗ್ದಾಳಿ

ನವದೆಹಲಿ:ಯಾರಾದರೂ ಭಾರತ್ ಮಾತಾ ಕೀ ಜೈ ಎಂದು ಕೂಗಿದರೆ ಮಮತಾ ಬ್ಯಾನರ್ಜಿ ಅವರಿಗೆ ಕೋಪ ಬರುತ್ತದೆ ಎನ್ನುವ ಮೂಲಕ ಪ್ರಧಾನಿ ನರೇಂದ್ರ ಮೋದಿ‌ ಅವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ದೇಶದ ವಿರುದ್ಧವಾಗಿ ಮಾತನಾಡಿದಾಗಲೂ ಸುಮ್ಮನಿರುತ್ತಾರೆ ಆದರೆ ಭಾರತ್ ಮಾತಾ ಕೀ ಜೈ ಅಂದರೆ ಅವರಿಗೆ ಕೋಪ ಬರುತ್ತದೆ ಎಂದು ಪ್ರಧಾನಿ ಮೋದಿ ರುಗೇಟು ನೀಡಿದ್ದಾರೆ.ಪಶ್ಚಿಮ ಬಂಗಾಳದ ಕಾರ್ಯಕ್ರಮವೊಂದರಲ್ಲಿ ತಿರುಗೇಟು ನೀಡಿದ್ದಾರೆ.
ಸ್ವಾಮಿ ವಿವೇಕಾನಂದ ಜಯಂತಿ ದಿನದಂದು ಕೋಲ್ಕತ್ತಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಕೆಲವರು ಭಾರತ್ ಮಾತಾ ಕೀ ಜೈ, ಜೈ ಶ್ರೀರಾಮ ಎಂದು ಘೋಷಣೆ ಕೂಗಿದ್ದರು.
ಅಂದು ವೇದಿಕೆ ಮೇಲೆ ಇದ್ದ ಪ್ರಧಾನಿ ನರೇಂದ್ರ ಮೋದಿ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಅಸ್ಸಾಂ, ಪಶ್ಚಿಮ ಬಂಗಾಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಈ ಎರಡೂ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಇರುವ ಹಿನ್ನೆಲೆಯಲ್ಲಿ ರಾಜಕೀಯ ವಾಗಿ ಮಮತಾ ಅವರನ್ನು ಎದುರಿಸಲು ಸಜ್ಜಾಗಿದ್ದಾರೆ.
ಪಶ್ಚಿಮ‌ ಬಂಗಾಳದ ಹಲ್ದಿಯಾದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿಹೀಗಾಗಿ ಮಮತಾ ಬ್ಯಾನರ್ಜಿ ಅವರ ಹೇಳಿ ಉಲ್ಲೇಖಿಸಿ ತಿರುಗೇಟು ನೀಡಿದ್ದಾರೆ.

ಪ್ರಮುಖ ಸುದ್ದಿ :-   ದೆಹಲಿ ಮದ್ಯ ನೀತಿ ಪ್ರಕರಣ : ಅರವಿಂದ ಕೇಜ್ರಿವಾಲಗೆ ದೊಡ್ಡ ರಿಲೀಫ್ ನೀಡಿದ ಸುಪ್ರೀಂ ಕೋರ್ಟ್

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement