ಶ್ರೀರಾಮ ಮಂದಿರ ನಿರ್ಮಾಣಕ್ಕೆ ಕ್ರೈಸ್ತರಿಂದ ೧ ಕೋಟಿ ರೂ.ದೇಣಿಗೆ

ಬೆಂಗಳೂರು : ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ರಾಜ್ಯದ ಕ್ರೈಸ್ತ ಸಮುದಾಯ ಕೈಜೋಡಿಸಿದ್ದು, ಒಂದು ಕೋಟಿ ರೂ.ಗಳಿಗೂ  ಹೆಚ್ಚು ದೇಣಿಗೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ   ಆಯೋಜಿಸಿದ್ದ ಸಭೆಯಲ್ಲಿ ಕ್ರೈಸ್ತ ಸಮುದಾಯದ  ಶಿಕ್ಷಣ ತಜ್ಞರು, ಉದ್ಯಮಿಗಳು,ಅನಿವಾಸಿ ಭಾರತೀಯರು, ಸಿಇಒಗಳು, ಮಾರ್ಕೆಟಿಂಗ್ ತಜ್ಞರು, ಸಮಾಜ ಸೇವಕರು, ಸಮುದಾಯದ ಮುಖಂಡರು ಭಾಗಿಯಾಗಿ ರಾಮ ಮಂದಿರ ನಿರ್ಮಾಣಕ್ಕೆ ತಮ್ಮ ಕೈಲಾದ ಸೇವೆ ಮಾಡುವುದಾಗಿ ಭರವಸೆ ನೀಡಿದರು.

ಮಾತನಾಡಿದ ಡಿಸಿಎಂ .ಸಿ.ಎನ್.ಅಶ್ವತ್ಥನಾರಾಯಣ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಅಲ್ಪಸಂಖ್ಯಾತ ಸಮುದಾಯಗಳಿಗೆ ವಿರುದ್ಧ ಎನ್ನುವುದು ತಪ್ಪು . ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್’ ಬಿಜೆಪಿಯ ಮಂತ್ರ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ ಎಂದರು.

ಕ್ರೈಸ್ತ ಸಮುದಾಯದ ಪರವಾಗಿ ಎನ್‌ಆರ್‌ಐ ಉದ್ಯಮಿ ರೊನಾಲ್ಡ್ ಕೊಲಾಕೊ ಮಾತನಾಡಿ  ,  ದೇಶದ ವಿಷಯಗಳಲ್ಲಿ ನಾವು ಯಾವಾಗಲೂ ಬೆಂಬಲ ನೀಡುತ್ತೇವೆ” ಎಂದು ಹೇಳಿದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement