ಹೊಸ ಸಾರಿಗೆ ನೀತಿಯಿಂದ ೧೦ ಲಕ್ಷ ಕೋಟಿ ಆದಾಯ:ಗಡ್ಕರಿ

ನವದೆಹಲಿ: ಹಳೆಯ ಮತ್ತು ಮಾಲಿನ್ಯಕಾರಕ ವಾಹನಗಳನ್ನುಗುಜರಿಗೆ ಹಾಕಿ ಹೊಸ ವಾಹನಗಳನ್ನು ಖರೀದಿಸುವವರಿಗೆ ಹೊಸ ನೀತಿಯಡಿ ವಿವಿಧ ಪ್ರಯೋಜನಗಳನ್ನು ನೀಡಲಾಗುವುದು ಎಂದು ಕೇಂದ್ರ ಸಾರಿಗೆ ಸಚಿವ ನಿತೀನ್‌ ಗಡ್ಕರಿ ತಿಳಿಸಿದರು.
ಹೊಸ ಸಾರಿಗೆ ನೀತಿ ವರದಾನವಾಗಿದ್ದು, ಇದರಿಂದ ಮುಂದಿನ ವರ್ಷಗಳಲ್ಲಿ ಭಾರತದ ವಾಹನ ಉದ್ಯಮದ ವಹಿವಾಟು ಶೇ.೩೦ರಷ್ಟು ಹೆಚ್ಚಳವಾಗುವುದಲ್ಲದೇ ೧೦ ಲಕ್ಷ ಕೋಟಿ ರೂ. ಆದಾಯ ದೊರೆಯಲಿದೆ ಎಂದರು.
2021-22ರ ಕೇಂದ್ರ ಬಜೆಟ್‌ನಲ್ಲಿ ಘೋಷಿಸಲಾದ ಸ್ವಯಂಪ್ರೇರಿತ ವಾಹನ ಸ್ಕ್ರ್ಯಾಪಿಂಗ್ ನೀತಿಯು ಭಾರತೀಯ ಅಟೋಮೊಬೈಲ್‌ ವಲಯವನ್ನು ಉತ್ತೇಜಿಸುವ ಪ್ರಮುಖ ಹೆಜ್ಜೆಯಾಗಿದೆ. ಸ್ವಯಂಪ್ರೇರಿತ ವಾಹನ ಸ್ಕ್ರ್ಯಾಪಿಂಗ್ ನೀತಿಯಡಿಯಲ್ಲಿ, ೨೦ ವರ್ಷಗಳ ಖಾಸಗಿ ವಾಹನಗಳು ಹಾಗೂ ೧೫ ವರ್ಷಗಳ ವಾಣಿಜ್ಯ ವಾಹನಗಳ ಫಿಟ್‌ನೆಸ್‌ ಪರೀಕ್ಷೆ ನಡೆಸಲಾಗುವುದು.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ನಮ್ಮ ಗಾಯದ ಮೇಲೆ ಉಪ್ಪು ಸವರಬೇಡಿ, ಕಸಬ್ ಹೊಗಳುವುದಿದ್ದರೆ ಪಾಕಿಸ್ತಾನಕ್ಕೆ ಹೋಗಿ": 26/11 ದಾಳಿ ಬಗ್ಗೆ ಕಾಂಗ್ರೆಸ್‌ ನಾಯಕನ ಹೇಳಿಕೆಗೆ ಕಸಬ್ ವಿಚಾರಣೆ ಸಾಕ್ಷಿಯ ಆಕ್ಷೇಪ

ನಿಮ್ಮ ಕಾಮೆಂಟ್ ಬರೆಯಿರಿ

advertisement