ಕೇಂದ್ರಕ್ಕೆ ರೈತರ ಪಟ್ಟಿ ಕಳುಹಿಸಲಾಗಿದೆ:ಮಮತಾ ಸ್ಪಷ್ಟನೆ

ಕೋಲ್ಕತ್ತ: ಪ್ರಧಾನಮಂತ್ರಿ ಕಿಸಾನ ಸಮ್ಮಾನ್‌ ಯೋಜನೆಗೆ ಪಶ್ಚಿಮ ಬಂಗಾಳ ೨.೫ ಲಕ್ಷ ರೈತರ ಪಟ್ಟಿಯನ್ನು ಕೇಂದ್ರಕ್ಕೆ ಕಳುಹಿಸಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಕೇಂದ್ರ ಸರಕಾರದ ಯೋಜನೆಗಳನ್ನು ಜಾರಿಗೊಳಿಸಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ನೀಡಿದ ಮರುದಿನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೀಡಿರುವ ಹೇಳಿಕೆ ಮಹತ್ವ ಪಡೆದುಕೊಂಡಿದೆ. ರೈತರ ಪಟ್ಟಿಯನ್ನು ಕಳುಹಿಸಿದರೂ ಕೇಂದ್ರ ಸರಕಾರ ಯಾಕೆ ಫಲಾನುಭವಿಗಳಿಗೆ ಧನಸಹಾಯ ನೀಡುತ್ತಿಲ್ಲ ಎಂದು ಅವರು ಮರುಪ್ರಶ್ನೆ ಮಾಡಿದ್ದಾರೆ.
ರಾಜ್ಯ ಸರಕಾರ ೧೯ ನೂತನ ಯೋಜನೆಗಳನ್ನು ಅನುಷ್ಠಾನಗೊಳಿಸಲಿದ್ದು, ಇದರಿಂದ ೩.೨೯ ಲಕ್ಷ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ ಎಂದರು.
ರೈತರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಮುಖ್ಯಮಂತ್ರಿ ರಾಜ್ಯ ಸರ್ಕಾರದ ‘ಕ್ರಿಶಕ್ ಬಂಧು’ ಯೋಜನೆಯಡಿ ವಾರ್ಷಿಕ ಆರ್ಥಿಕ ಸಹಾಯವನ್ನು ರೂ. 5,000 ದಿಂದ ರೂ. 6,000 ಕ್ಕೆ ಹೆಚ್ಚಿಸಿದ್ದಾರೆ. ಕೇಂದ್ರ ಸರಕಾರ ಪಿಎಂ ಕಿಸಾನ ಸಮ್ಮಾನ್‌ ಯೋಜನೆಯಡಿ ೨ ಹೆಕ್ಟೇರ್‌ ವರೆಗಿನ ಭೂಮಿ ಹೊಂದಿರುವ ರೈತರಿಗೆ ಮೂರು ಕಂತುಗಳಲ್ಲಿ ವರ್ಷಕ್ಕೆ ೬೦೦೦ರೂ. ನೀಡುತ್ತದೆ.
ರವಿವಾರ ಹಲ್ಡಾದಲ್ಲಿ ಚುನಾವಣಾ ಪ್ರಚಾರದಲ್ಲಿ ಪ್ರಧಾನಿ ಮೋದಿ, ಕೇಂದ್ರದ ಆಯುಷ್ಮಾನ್‌ ಭಾರತ, ಪಿಎಂ ಕಿಸಾನ ಸಮ್ಮಾನ್‌ ಯೋಜನೆಗಳನ್ನು ಪಶ್ಚಿಮ ಬಂಗಾಳದಲ್ಲಿ ಅನುಷ್ಠಾನಗೊಳಿಸಿಲ್ಲ ಎಂದು ಆರೋಪ ಮಾಡಿದ್ದರು. ಅಲ್ಲದೇ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಸ್ಥಗಿತಗೊಂಡ ಯೋಜನೆಗಳನ್ನು ರಾಜ್ಯದಲ್ಲಿ ಜಾರಿಗೊಳಿಸಲಾಗುವುದು ಎಂದು ಭರವಸೆ ನೀಡಿದ್ದರು.

ಪ್ರಮುಖ ಸುದ್ದಿ :-   ಹರಿಯಾಣದಲ್ಲಿ ಬಿಜೆಪಿಗೆ ಬೆಂಬಲ ಘೋಷಿಸಿದ ಸಾವಿತ್ರಿ ಜಿಂದಾಲ್‌, ಇಬ್ಬರು ಸ್ವತಂತ್ರ ಅಭ್ಯರ್ಥಿಗಳು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement