ಕೃಷ್ಣಗಿರಿ: ಉಚ್ಚಾಟಿತ ಎಐಎಡಿಎಂಕೆ ನಾಯಕಿ ವಿ.ಕೆ.ಶಶಿಕಲಾ ನಾಲ್ಕು ವರ್ಷಗಳ ಕಾರಾಗೃಹವಾಸ ಪೂರ್ಣಗೊಳಿಸಿ ತವರು ರಾಜ್ಯ ತಮಿಳುನಾಡಿಗೆ ಮರಳಿದರು.
ಕೃಷ್ಣಗಿರಿಗೆ ಬಂದ ಮಾಜಿ ಮುಖ್ಯಮಂತ್ರಿ ಜಯಲಲಿತಾ ಆಪ್ತೆ ಶಶಿಕಲಾ ಅವರನ್ನು ನೂರಾರು ಬೆಂಬಲಿಗರು ಪುಷ್ಪವೃಷ್ಟಿ ಮೂಲಕ ಬರಮಾಡಿಕೊಂಡರು.
ಭ್ರಷ್ಟಾಚಾರ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಶಶಿಕಲಾ ೪ ವರ್ಷ ಕಾರಾಗೃಹ ಶಿಕ್ಷೆ ಅನುಭವಿಸಿದ್ದಾರೆ. ಶಶಿಕಲಾ ಹೊಸೂರು ಪಟ್ಟಣದ ಮರಿಯಮ್ಮನ್ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ಅವರೊಂದಿಗೆ ಅವರ ಸೋದರಳಿಯ ಟಿಟಿವಿ ದಿನಕರನ್ ಇದ್ದರು. ಅವರು ಎಐಎಡಿಎಂಕೆ ಸಂಸ್ಘಾಪಕ ದಿ. ಎಂ.ಜಿ.ರಾಮಚಂದ್ರನ್ ಅವರ ನಿವಾಸಕ್ಕೆ ತೆರಳುವ ಸಾಧ್ಯತೆಯಿದೆ.
ನಿಮ್ಮ ಕಾಮೆಂಟ್ ಬರೆಯಿರಿ