ಪರಿಷತ್ತಿನಲ್ಲೂ ಗೋ ಹತ್ಯೆ ನಿಷೇಧ ಕಾಯ್ದೆ ಅಂಗೀಕಾರ

ಬೆಂಗಳೂರು: ವಿಧಾನಸಭೆಯಲ್ಲಿ ಅಂಗೀಕಾರವಾಗಿದ್ದ ಕರ್ನಾಟಕ ಗೋ ಹತ್ಯೆ ನಿಷೇಧ ಕಾಯ್ದೆಗೆ ವಿಧಾನ ಪರಿಷತ್ತಿನಲ್ಲಿ ಸೋಮವಾರ ಅಂಗೀಕಾರ ದೊರೆಯಿತು.
ಕಾಯ್ದೆ ಮಂಡನೆ ಬಗ್ಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರ ಗದ್ದಲ ಮಾಡಿದರೂ ಕೊನೆಗೆ ಧ್ವನಿ ಮತಕ್ಕೆ ಹಾಕಿದಾಗ ಅಂಗೀಕಾರ ದೊರೆಯಿತು.
ಮಸೂದೆ ಮಂಡಿಸಿದ ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ಅವರು ಕಾಯ್ದೆಗೆ ಸದನ ಒಪ್ಪಿಗೆ ನೀಡುವಂತೆ ಮನವಿ ಮಾಡಿದರು.
ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರು ಇದಕ್ಕೆ ಆಕ್ಷೇಪಿಸಿ ರಾಜ್ಯದಲ್ಲಿ ಈಗಾಗಲೇ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದೆ. ಹೀಗಾಗಿ ಮತ್ತೊಂದು ಜಾರಿಗೆ ತರುವ ಅಗತ್ಯವೇನಿದೆ ಎಂದು ಪ್ರಶ್ನಿಸಿದರು..
ಕಾಂಗ್ರೆಸ್ ಸದಸ್ಯರ ಧರಣಿ ಗದ್ದಲ ಕೋಲಾಹಲವೆಬ್ಬಿಸಿದರು. ಆಗ ಸಭಾಪತಿ ಸ್ಥಾನದಲ್ಲಿದ್ದ ಉಪಸಭಾಪತಿ ಎಂ.ಕೆ. ಪ್ರಾಣೇಶ್ ಅವರು ವಿಧೇಯಕವನ್ನು ಮತಕ್ಕೆ ಹಾಕಿದಾಗ ಇದು ಧ್ವನಿಮತದಿಂದ ಅಂಗೀಕಾರವಾಯಿತು. ವಿಧಾನಪರಿಷತ್ತಿನಲ್ಲಿ ಗೋಹತ್ಯಾ ನಿಷೇಧ ಕಾಯ್ದೆಗೆ ಅಂಗೀಕಾರ ದೊರೆಯುತ್ತಿದ್ದಂತೆ ಸರ್ಕಾರದ ಕ್ರಮ ಖಂಡಿಸಿ ಕಾಂಗ್ರೆಸ್ ಸದಸ್ಯರಾದ ನಾರಾಯಣಸ್ವಾಮಿ, ಆರ್ ಬಿ ತಿಮ್ಮಾಪುರ, ಮತ್ತು ನಸೀರ್ ಅಹ್ಮದ್ ಅವರು ವಿಧೇಯಕದ ಪ್ರತಿ ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರದ ಕ್ರಮ ಖಂಡಿಸಿ ಕಾಂಗ್ರೆಸ್ ಮತ್ತು ಜೆಡಿಎಸ್ ಸದಸ್ಯರು ಸದನದಿಂದ ಹೊರ ನಡೆದರು.ಬಳಿಕ ಉಪಸಭಾಪತಿ ಎಂ.ಕೆ. ಪ್ರಾಣೇಶ್ ಅವರು ಸದನದ ಕಲಾಪವನ್ನು ನಾಳೆಗೆ ಮುಂದೂಡಿದರು

ಪ್ರಮುಖ ಸುದ್ದಿ :-   ಸರ್ಕಾರದಿಂದ ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್‌ ; ಇದು ಓಲೈಕೆ ರಾಜಕಾರಣ ಎಂದು ಬಿಜೆಪಿ ಕಿಡಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement