ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಿರುವ ಬಗ್ಗೆ ನಾನು ಮಾತನಾಡುವುದಿಲ್ಲ. ಈಗ ನನಗೆ ಒಳ್ಳೆಯ ಅವಕಾಶ ಬಂದಿದೆ. ಪಕ್ಷದ ನಿರ್ದೇಶನದ ಮೇರೆಗೆ ನಾಮಪತ್ರ ಸಲ್ಲಿಸಿದ್ದೇನೆ ಎಂದು ಜೆಡಿಎಸ್‍ನ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಹೇಳಿದ್ದಾರೆ.
ಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಹೊರಟ್ಟಿ ಬಿಜೆಪಿಯ ಬೆಂಬಲದೊಂದಿಗೆ ನಾಮಪತ್ರ ಸಲ್ಲಿಸಿದ್ದೇನೆ. ಕಾಂಗ್ರೆಸ್‍ನವರು ಅಭ್ಯರ್ಥಿ ಹಾಕಿರುವ ವಿಚಾರವಾಗಿ ನಾನು ಪ್ರತಿಕ್ರಿಯಿಸುವುದಿಲ್ಲ. ಅದು ಅವರ ಪಕ್ಷದ ನಿರ್ಧಾರ. ಚುನಾವಣೆಯಲ್ಲಿ ತಮಗೆ ಗೆಲುವು ಖಚಿತ ಎಂದು ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಿಮ್ಮ ಕಾಮೆಂಟ್ ಬರೆಯಿರಿ