ಬಿಬಿಎಂಪಿ ಸಹಾಯಕ ನಿರ್ದೇಶಕರ ಮನೆಯಲ್ಲಿ ಬಿಬಿಎಂಪಿ ಕಡತ ಪತ್ತೆ

posted in: ರಾಜ್ಯ | 0

ಬೆಂಗಳೂರು: ಬಿಬಿಎಂಪಿ ಸಹಾಯಕ ನಿರ್ದೇಶಕ ದೇವೇಂದ್ರಪ್ಪ ಅವರ ಮನೆಯಲ್ಲಿ ಬಿಬಿಎಂಪಿ ನಗರಯೋಜನೆ ವಿಭಾಗಕ್ಕೆ ಸೇರಿದ 430ಕ್ಕೂ ಹೆಚ್ಚು ಕಡತಗಳು ಪತ್ತೆಯಾಗಿವೆ.
ರಾಜ್ಯ ಭ್ರಷ್ಟಾಚಾರ ನಿಗ್ರಹದ ಬಲೆಗೆ ಬಿದ್ದಿರುವ ಅವರ ಮನೆಯಲ್ಲಿ ಇದಲ್ಲದೆ, 120 ಲೀಟರ್ ಮದ್ಯದ ಬಾಟಲ್‍ಗಳು ಸಹ ಪತ್ತೆಯಾಗಿವೆ.
ಪ್ರಕರಣದ ತನಿಖೆಯನ್ನು ಮುಂದುವರೆಸಿರುವ ಎಸಿಬಿ ಅಧಿಕಾರಿಗಳು ದೇವೇಂದ್ರಪ್ಪ ಅವರ ಮನೆಯನ್ನು ಶೋಧಿಸಿದಾಗ ವಿವಿಧ ಬ್ಯಾಂಕ್ ಅಕೌಂಟ್‍ಗಳು, ಬೆಲೆ ಬಾಳುವ ಕಾರುಗಳು ನಗದು ಹಣ, ಅಲ್ಲದೆ ಬಿಬಿಎಂಪಿ ಹಿರಿಯ ಅಧಿಕಾರಿಗಳ ಹೆಸರಿನಲ್ಲಿನ ಸೀಲು ಮತ್ತು ಕಚೇರಿಯ ಸೀಲು ಪತ್ತೆಯಾಗಿದೆ…!
ಇವರ ಬಳಿ ದೊರೆತ ಬೆಲೆ ಬಾಳುವ ವಿವಿಧ ಬ್ರಾಂಡ್‍ನ ಮದ್ಯದ ಬಗ್ಗೆ ಅಬಕಾರಿ ಇಲಾಖೆಯಲ್ಲಿ ಪ್ರತ್ಯೇಕವಾಗಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ. ದೇವೇಂದ್ರಪ್ಪ ಅವರ ಬಳಿ ದೊರೆತ ಬಿಬಿಎಂಪಿ ನಗರ ಯೋಜನೆ ವಿಭಾಗಕ್ಕೆ ಸೇರಿದ ಕಡತಗಳು ಮತ್ತು ಸೀಲುಗಳ ಬಗ್ಗೆ ವಿಚಾರಣೆ ಮುಂದುವರೆದಿದೆ. ಕಳೆದ 5ರಂದು ಎಸಿಬಿ ದಾಳಿ ಸಂದರ್ಭದಲ್ಲಿ ಕಂತೆ ಕಂತೆ ಹಣ ಪತ್ತೆಯಾಗಿತ್ತು. ಒಟ್ಟು 27 ಲಕ್ಷ 40 ಸಾವಿರ ರೂ.ಗಳನ್ನು ಮುಂದಿನ ತನಿಖೆ ಸಲುವಾಗಿ ಎಸಿಬಿ ವಶಕ್ಕೆ ಪಡೆದುಕೊಂಡಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ಮೊದಲ ಪಟ್ಟಿಯಲ್ಲಿ ತಂದೆ-ಮಕ್ಕಳಿಗೆ ಟಿಕೆಟ್ ನೀಡಿದ ಕಾಂಗ್ರೆಸ್‌ :ಕುಟುಂಬ ರಾಜಕಾರಣಕ್ಕೆ ಮಣೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement