ಮುಂಬೈ: ಕೋರೆಗಾಂವ ಹಿಂಸಾಚಾರ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ನ್ಯಾಯಾಲಯ ತನ್ನ ಶಾಸನಬದ್ಧ ಜಾಮೀನು ತಿರಸ್ಕರಿಸಿದ್ದನ್ನು ಪ್ರಶ್ನಿಸಿ ಸಾಮಾಜಿಕ ಕಾರ್ಯಕರ್ತ ಗೌತಮ್ ನವಲಖಾ ಸಲ್ಲಿಸಿದ್ದ ಮೇಲ್ಮನವಿಯನ್ನು ಬಾಂಬೆ ಉಚ್ಚ ನ್ಯಾಯಾಲಯ ಸೋಮವಾರ ವಜಾಗೊಳಿಸಿದೆ.
ಹಿರಿಯ ನ್ಯಾಯವಾದಿ ಕಪಿಲ್ ಸಿಬಲ್ ಮೂಲಕ ಸೆಪ್ಟೆಂಬರ್ 9 ರಂದು ಸಲ್ಲಿಸಲಾದ ಮೇಲ್ಮನವಿಯನ್ನು ನ್ಯಾಯಾಲಯ ವಜಾಗೊಳಿಸಿದೆ.
ನವಲಖಾ ಅವರ ಗೃಹಬಂಧನದ 34 ದಿನಗಳನ್ನು ಬಂಧನವೆಂದು ಪರಿಗಣಿಸಲಾಗಿಲ್ಲ ಮತ್ತು ಎನ್ಐಎ ತನ್ನ ಅಪರಾಧ ತನಿಖೆ ಪ್ರಕ್ರಿಯೆ ಪ್ರಕಾರ 90 ದಿನಗಳ ನಿಗದಿತ ಅವಧಿಯೊಳಗೆ ತನ್ನ ಚಾರ್ಜ್ ಶೀಟ್ ಸಲ್ಲಿಸಿಲ್ಲ ಎಂದು ಸಿಬಲ್ ವಾದಿಸಿದ್ದರು. ಆದ್ದರಿಂದ ನವಲಖಾ ಡಿಫಾಲ್ಟ್ ಜಾಮೀನು ಪಡೆಯಲು ಅರ್ಹರಾಗಿದ್ದಾರೆ ಎಂದು ವಾದ ಮಂಡಿಸಿದರು. ಆದರೆ ನ್ಯಾಯಮೂರ್ತಿಗಳಾದ ಎಸ್.ಎಸ್.ಶಿಂಧೆ ಹಾಗೂ ಎಂ.ಎಸ್. ಕಾರ್ಣಿಕ ಅವರನ್ನೊಳಗೊಂಡ ವಿಭಾಗೀಯ ಪೀಠ ಮೇಲ್ಮನವಿಯನ್ನು ವಜಾಮಾಡಿತು.
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ