ದೆಹಲಿ ಗಡಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಫೆ.೧೦ರಂದು ಉತ್ತರ ಪ್ರದೇಶದ ಸಹರಾನ್ಪುರದಲ್ಲಿ ನಡೆಯುವ ಕಿಸಾನ್ ಮಹಾಪಂಚಾಯತ್‌ನಲ್ಲಿ ಪಾಲ್ಗೊಳ್ಳಲಿದ್ದಾರೆ.
ನಂತರ ಫೆ.೧೩ರಂದು ಪ್ರಿಯಾಂಕಾ ಬಿಜ್ನೋರ್ ಮತ್ತು ಮುಜಫರ್‌ನಗರ ಜಿಲ್ಲೆಗಳ ರೈತರೊಂದಿಗೆ ಸಂವಾದ ನಡೆಸುವ ನಿರೀಕ್ಷೆಯಿದೆ. ದೆಹಲಿ ಗಡಿಯಲ್ಲಿ ವಿವಾದಾತ್ಮಕ ಕಾನೂನುಗಳನ್ನು ರದ್ದುಪಡಿಸುವಂತೆ ಆಗ್ರಹಿಸಿ ಪಂಜಾಬ್, ಹರಿಯಾಣ ಹಾಗೂ ಉತ್ತರ ಪ್ರದೇಶ ರಾಜ್ಯಗಳ ರೈತರು ಕಳೆದ ೨ ತಿಂಗಳುಗಳಿಂದ ಪ್ರತಿಭಟನೆ ನಡೆಸುತ್ತಿರುವ ಸಂದರ್ಭದಲ್ಲಿ ಪ್ರಿಯಾಂಕಾ ಗಾಂಧಿ ರೈತರ ಮಹಾಪಂಚಾಯತ್‌ನಲ್ಲಿ ಪಾಲ್ಗೊಳ್ಳುತ್ತಿರುವುದು ಮಹತ್ವ ಪಡೆದಿದೆ.
ನಿಮ್ಮ ಕಾಮೆಂಟ್ ಬರೆಯಿರಿ