ಕೊರೋನಾ ಪ್ರಕರಣ: ಗಣನೀಯ ಇಳಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿನ ಸಂಖ್ಯೆ ದಿನದಿಂದ ದಿನಕ್ಕೆ ಇಳಿಕೆ ಆಗುತ್ತಿದ್ದು, ಕಳೆದ ೨೪ ಗಂಟೆಗಳಲ್ಲಿ ೯,೧೧೦ ಮಂದಿಗೆ ಹೊಸ ಸೋಂಕು ಪ್ರಕರಣ ಧೃಢಪಟ್ಟಿವೆ ಹಾಗೂ ೭೮ ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ಹೊಸದಾಗಿ ದಾಖಲಾಗಿರುವ ಪ್ರಕರಣ ಸೇರಿದಂತೆ ಇದುವರೆಗೆ ಒಟ್ಟಾರೆ ೧,೦೮,೪೭,೩೦೪ಕ್ಕೆ ಏರಿಕೆಯಾಗಿದೆ. ಈ ಪೈಕಿ ೧,೦೫,೪೮,೫೨೧ ಮಂದಿ ಈವರೆಗೆ ಚೇತರಿಸಿಕೊಂಡಿದ್ದಾರೆ.
ಹೊಸದಾಗಿ ೭೮ ಮಂದಿ ಮೃತಪಟ್ಟಿರುವುದೂ ಸೇರಿದಂತೆ, ದೇಶದಲ್ಲಿ ಈವರೆಗೆ ೧,೫೫,೧೫೮ ಮಂದಿ ಮೃತಪಟ್ಟಿದ್ದಾರೆ. ಸೋಂಕಿನಿಂದ ಮೃತಪಡುತ್ತಿರುವವರ ಸಂಖ್ಯೆ ಶೇ ೧.೪೩ ರಷ್ಟು ಇದೆ ಎಂದು ಸಚಿವಾಲಯ ತಿಳಿಸಿದೆ.
ಶೇ.೧.೩೨ ರಷ್ಟು ಸಕ್ರಿಯ ಪ್ರಕರಣ
ದೇಶದಲ್ಲಿರುವ ಪಟ್ಟಿಯಲ್ಲಿರುವ ಒಟ್ಟಾರೆ ಸೋಂಕಿತರ ಪೈಕಿ ಶೇಕಡ ೧.೩೨ ಎರಡರಷ್ಟು ಸಕ್ರಿಯ ಪ್ರಕರಣಗಳಿವೆ.
ಸದ್ಯ ದೇಶದಲ್ಲಿ ೧,೪೩,೬೨೫ ಸಕ್ರಿಯ ಪ್ರಕರಣಗಳು ಇವೆ. ದೇಶದಲ್ಲಿ ಕೊರೊನಾ ಸೋಂಕಿನ ಚೇತರಿಕೆಯ ಪ್ರಮಾಣ ಶೇಕಡ ೯೭.೨೫ ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ

advertisement

ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ಅಡ್ಮಿಶನ್ ಗಾಗಿ ಇಂದೇ ಕರೆ ಮಾಡಿ
9535127775 / 9901837775 / 6364528715 / 08362775155 / https://icsmpucollege.com/
ಓದಿರಿ :-   ಧಾರ್ಮಿಕ ಭಾವನೆಗಳಿಗೆ ಧಕ್ಕೆ, ಗಲಭೆಗಳಿಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್ ಬಂಧನ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

advertisement

ನಿಮ್ಮ ಕಾಮೆಂಟ್ ಬರೆಯಿರಿ