ಪೆಟ್ರೋಲ್‌-ಡೀಸೆಲ್‌ ಬೆಲೆ ಗರಿಷ್ಠ

ನವದೆಹಲಿ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ದರ ಏರಿಕೆಯಾಗುತ್ತಿದ್ದು, ಪೆಟ್ರೋಲ್-ಡೀಸೆಲ್ ದರ
ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿದೆ.
ಮಂಗಳವಾರ ಪ್ರತಿ ಲೀಟರ್‌ ಪೆಟ್ರೋಲ್-ಡೀಸೆಲ್‌ಗೆ ೩೫ ಪೈಸೆಯಷ್ಟು ಹೆಚ್ಚಳವಾಗಿದೆ. ದಿನದಿಂದ ದಿನಕ್ಕೆ ಇಂಧನ ದರ
ಗಗನಮುಖಿಯಾಗುತ್ತಿದೆ. ಅದರಲ್ಲೂ ಡೀಸೆಲ್ ದರ ಹೆಚ್ಚಳವಾಗುತ್ತಿರುವುದರಿಂದ ಅಗತ್ಯ ವಸ್ತುಗಳ ದರ ಏರಿಕೆಯಾಗಿ ಶ್ರೀಸಾಮಾನ್ಯನ ಜೇಬಿಗೆ ಕತ್ತರಿ ಬಿದ್ದಿದೆ.
ದೆಹಲಿಯಲ್ಲಿ ಪೆಟ್ರೋಲ್ ದರ ೮೭.೩೦ರೂ., ಮುಂಬೈನಲ್ಲಿ ೯೩.೮೩ ರೂ.ನಷ್ಟಿದೆ. ಪ್ರತಿ ಲೀಟರ್ ಡೀಸೆಲ್ ದರ ದೆಹಲಿಯಲ್ಲಿ ೭೭.೪೮, ಮುಂಬೈನಲ್ಲಿ ೮೪.೩೬ ರೂ.ಗಳಿಗೆ ಮಾರಾಟವಾಗುತ್ತಿದೆ. ಬೆಂಗಳೂರಿನಲ್ಲಿ ಪ್ರತಿ ಲೀ. ಪೆಟ್ರೋಲ್ ಬೆಲೆ ೮೯.೮೩ ಹಾಗೂ ಡೀಸೆಲ್ ದರ ೮೨.೭೮ ರೂ.ನಷ್ಟಿದೆ.ಬ್ರೆಂಟ್ ಕಚ್ಚಾತೈಲದ ದರ ಸೋಮವಾರ ಪ್ರತಿ ಬ್ಯಾರೆಲ್‌ಗೆ ೬೦ ಡಾಲರ್ ತಲುಪಿದೆ. ಇದು ಈ ವರ್ಷದ ಗರಿಷ್ಠ ಮೊತ್ತವಾಗಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ವೀಡಿಯೊ..| ರತನ್‌ ಟಾಟಾ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು ತನ್ನನ್ನು ರಕ್ಷಿಸಿದ ವ್ಯಕ್ತಿಗೆ ಅಂತಿಮ ನಮನ ಸಲ್ಲಿಸಿದ ಪ್ರೀತಿಯ ನಾಯಿ ʼಗೋವಾʼ

ನಿಮ್ಮ ಕಾಮೆಂಟ್ ಬರೆಯಿರಿ

advertisement