ಬಂಗಾಳಕ್ಕೆ ಕಿಸಾನ್‌ ಸಮ್ಮಾನ ಹಣ ನೀಡದ ಕೇಂದ್ರ: ಮಮತಾ ಆರೋಪ

ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ರಾಜ್ಯದ ರೈತರಿಗೆ ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆಯಡಿ ಪ್ರೋತ್ಸಾಹಧನವನ್ನು ನೀಡುತ್ತಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.
ಬಿಜೆಪಿ ಕೇಂದ್ರದ ಯೋಜನೆಗಳನ್ನು ರಾಜ್ಯದ ಜನರಿಗೆ ತಲುಪಿಸುತ್ತಿಲ್ಲ ಎಂದು ಸುಳ್ಳು ಆರೋಪ ಮಾಡುತ್ತಿದ್ದು, ರಾಜ್ಯದ ತೃಣಮೂಲ ಕಾಂಗ್ರೆಸ್‌ ಸರಕಾರ ರೈತರಿಗೆ ತಲಾ ೫೦೦೦ರೂ. ಪ್ರೋತ್ಸಾಹಧನದೊಂದಿಗೆ ಉಚಿತ ಬೆಳೆ ವಿಮೆಯನ್ನೂ ನೀಡುತ್ತಿದೆ ಎಂದರು.
ಬಿಜೆಪಿ ಹಿಂದೂ ಧರ್ಮದ ಬಗ್ಗೆ ಸುಳ್ಳನ್ನು ಪ್ರಚಾರ ಮಾಡುತ್ತಿದೆ ಎಂದು ಆರೋಪಿಸಿದ ಬ್ಯಾನರ್ಜಿ, ತಮ್ಮ ಪಕ್ಷವು ಧರ್ಮದ ಆಧಾರದ ಮೇಲೆ ಜನರಲ್ಲಿ ವಿಭಜನೆಯನ್ನು ಬಯಸುವುದಿಲ್ಲ ಎಂದು ಹೇಳಿದರು.
ಬಿಜೆಪಿ ದೇಶವನ್ನು ಸ್ಮಶಾನವನ್ನಾಗಿ ಮಾಡುತ್ತಿದೆ ಆದರೆ ಬಂಗಾಳದಲ್ಲಿ ಇದಕ್ಕೆ ನಾವು ಅನುಮತಿ ನೀಡುವುದಿಲ್ಲ ಎಂದ ಅವರು, ಸತತ ಮೂರನೇ ಬಾರಿಗೆ ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿ ಗೆಲ್ಲುವುದರಲ್ಲಿ ಸಂಶಯವಿಲ್ಲ ಎಂದು ತಿಳಿಸಿದರು. ರಾಜ್ಯದಲ್ಲಿ 294 ಸದಸ್ಯರ ವಿಧಾನಸಭೆಗೆ ಎಪ್ರಿಲ್-ಮೇ ತಿಂಗಳಲ್ಲಿ ಚುನಾವಣೆ ನಡೆಯಲಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement