ಬಿಡಿಎ ಹಗರಣ: ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕ್ರಮಕ್ಕೆ ಸೂಚನೆ

ಬೆಂಗಳೂರು: ಬೆಂಗಳೂರು ಅಭಿವೃದ್ದಿ ಪ್ರಾಧಿಕಾರ(ಬಿಡಿಎ)ದಲ್ಲಿ ನಡೆದ ಹಗರಣದಲ್ಲಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಡಿಎನಲ್ಲಿ ನಡೆಯುತ್ತಿರುವ ಅವ್ಯವಹಾರಗಳ ಬಗ್ಗೆ ನನಗೆ ಮಾಹಿತಿ ಬಂದಿದೆ.ಮುಂದೆ ಯಾವುದೇ ರೀತಿಯ ಅಕ್ರಮ ಅಥವಾ ಕಾನೂನು ಬಾಹಿರ ಚಟುವಟಿಕೆಗಳಿಗೆ ಅವಕಾಶ ಕೊಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಇಲ್ಲಿ ಭಾರೀ ಪ್ರಮಾಣದ ಗೋಲ್‍ಮಾಲ್‍ಗಳು ನಡೆಯುತ್ತಿರುವುದರ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದಿವೆ. ಕೆಲವರು ಅಕ್ರಮಗಳನ್ನು ಸೃಷ್ಟಿಸಿ ಹಗರಣ ಮಾಡಲು ಹೊರಟಿದ್ದಾರೆ. ಅದಕ್ಕೆ ಅವಕಾಶ ನೀಡದಂತೆ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಅವರಿಗೆ ಸೂಚಿಸಿದ್ದೇನೆ. ಅಕ್ರಮದಲ್ಲಿ ಭಾಗಿಯಾದ ಅಧಿಕಾರಿಗಳನ್ನು ಇಲ್ಲಿ ಮುಂದುವರೆಸುವುದರಲ್ಲಿ ಅರ್ಥವೇ ಇಲ್ಲ. ಈಗಾಗಲೇ ಕೆಲವು ಅಧಿಕಾರಿಗಳನ್ನು ಮಾತೃ ಇಲಾಖೆಗೆ ನಿಯೋಜನೆ ಮಾಡುವಂತೆ ಸೂಚಿಸಲಾಗಿದೆ. ಹಗರಣದಲ್ಲಿ ಯಾರೇ ಭಾಗಿಯಾದರೂ ಅವರ ವಿರುದ್ಧ ಶಿಸ್ತುಕ್ರಮ ಖಚಿತ ಎಂದು ಎಚ್ಚರಿಕೆ ನೀಡಿದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement